DK Shivakumar : ಸಿಬಿಐ ಕೇಸ್ ವಾಪಸ್; ಡಿ.ಕೆ ಶಿವಕುಮಾರ್‌ಗೆ ಹೈಕೋರ್ಟ್ ಬಿಗ್ ರಿಲೀಫ್
DK Shivakumar : ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ತಾತ್ಕಾಲಿಕ ಬಿಗ್ ರಿಲೀಫ್ ಸಿಕ್ಕಿದೆ. ಇದರ ಮುಂದಿನ ಹೆಜ್ಜೆ ಏನು ಎನ್ನುವುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ನಡೆಸುತ್ತಿರುವ ತನಿಖೆಗೆ (CBI Investigation) ಸಂಬಂಧಿಸಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರಿಗೆ ರಾಜ್ಯ ಹೈಕೋರ್ಟ್ (Karnataka High court) ಬಿಗ್ ರಿಲೀಫ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ವರಾಳೆ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠ ಈ ಮಹತ್ವದ ಆದೇಶ ಹೊರಡಿಸಿದೆ. ಆದಾಯ ಮೀರಿ ಅಧಿಕ ಆಸ್ತಿ ಗಳಿಕೆ ಪ್ರಕರಣದ ಮೇಲ್ಮನವಿ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರ ಪರ ವಕೀಲರು ರಾಜ್ಯ ಸರ್ಕಾರ ತನಿಖೆಗೆ ಆದೇಶ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ. ಇದಕ್ಕೆ ಸಿಬಿಐ ವಿರೋಧ ವ್ಯಕ್ತಪಡಿಸಿದರೂ ಹೈಕೋರ್ಟ್ ಅದನ್ನು ಪರಿಗಣಿಸಿಲ್ಲ. ಈ ಪ್ರಕರಣದಲ್ಲಿ ಈಗ ಸಿಬಿಐ ತನ್ನ ತನಿಖೆಯನ್ನು ಮುಂದುವರಿಸಬಹುದೇ ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲ. ಅಥವಾ ರಾಜ್ಯ ಸರ್ಕಾರ ತನ್ನ ಸಂಪುಟದ ಮೂಲಕ ಕೇಸನ್ನು ಹಿಂಪಡೆದ ಆದೇಶ ನಿಲ್ಲುತ್ತದೆಯೇ ಎನ್ನುವುದು ಇನ್ನೂ ...