CM Siddaramaiah: ಸಿದ್ದರಾಮಯ್ಯಗೆ ಧಮ್ಮು, ತಾಕತ್ತು ಇದ್ದರೆ NIAಗೆ ಮೌಲ್ವಿ ಪ್ರಕರಣ ವಹಿಸಲಿ: ಯತ್ನಾಳ್

 CM Siddaramaiah: ಕಾಂಗ್ರೆಸ್‌ನವರು ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಮೂಲ ಮೌಲ್ವಿಗೂ ನಮಗೂ ಸಂಬಂಧವಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ‌. ಸಿದ್ದರಾಮಯ್ಯ ಸರ್ಕಾರಕ್ಕೆ, ಸಚಿವರಿಗೆ ಧಮ್ಮು ತಾಕತ್ತು ಇದ್ದರೆ ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡಲಿ. ಎಲ್ಲ ಸತ್ಯಾಂಶಗಳು ಹೊರಗೆ ಬರುತ್ತವೆ ಎಂದು ಬಸನಗೌಡ ಪಾಟೀಲ್‌ ಯತ್ನಾಳ್ ಸವಾಲು ಹಾಕಿದ್ದಾರೆ.


ಹುಬ್ಬಳ್ಳಿಯಲ್ಲಿ ಈಚೆಗೆ ನಡೆದಿದ್ದ ಮುಸ್ಲಿಂ ಸಮಾವೇಶದಲ್ಲಿ (Muslim conference) ಸಿಎಂ ಸಿದ್ದರಾಮಯ್ಯ ‌ಅವರು ವೇದಿಕೆ ಹಂಚಿಕೊಂಡಿದ್ದಾರೆ. ಇದರ ಬಗ್ಗೆ ಎನ್‌ಐಎ ತನಿಖೆ ಆಗಬೇಕು ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿ, ಯತ್ನಾಳ ಒಬ್ಬ ಮಹಾನ್ ಸುಳ್ಳುಗಾರ. ತನ್ವೀರ್‌ ಪೀರಾ ಅವರ ಜತೆಗೆ ನನಗೆ ಬಹಳ ವರ್ಷಗಳ ಸಂಬಂಧ ಇದೆ. ಆಗೆಲ್ಲ ಯಾಕೆ ಸುಮ್ಮನಿದ್ದರು? ಎಂದು ಪ್ರಶ್ನೆ ಮಾಡಿದ್ದರು. ಅಲ್ಲದೆ, ಕೇಂದ್ರದಲ್ಲಿ ಅವರದ್ದೇ ಸರ್ಕಾರ ಇದೆ. ಹೀಗಾಗಿ ತನಿಖೆ ನಡೆಸಿ ಪ್ರೂವ್‌ ಮಾಡಿ ಎಂದು ಸವಾಲು ಹಾಕಿದ್ದರು.

ಈಗ ಇದಕ್ಕೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್, ಸಿದ್ದರಾಮಯ್ಯ ಸರ್ಕಾರಕ್ಕೆ, ಸಚಿವರಿಗೆ ಧಮ್ಮು, ತಾಕತ್ತು ಇದ್ದರೆ ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಲಿ. ಮೌಲ್ವಿ ವಿರುದ್ಧದ ತನಿಖೆಗೆ ನಾನು ಸಿದ್ಧನಿದ್ದೇನೆ. ಎನ್‌ಐಎ ತನಿಖೆ ಮಾಡುತ್ತದೆ. ಕಾಂಗ್ರೆಸ್‌ನವರು ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಮೂಲ ಮೌಲ್ವಿಗೂ ನಮಗೂ ಸಂಬಂಧವಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ‌. ಸಿದ್ದರಾಮಯ್ಯ ಸರ್ಕಾರಕ್ಕೆ, ಸಚಿವರಿಗೆ ಧಮ್ಮು ತಾಕತ್ತು ಇದ್ದರೆ ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡಲಿ. ಎಲ್ಲ ಸತ್ಯಾಂಶಗಳು ಹೊರಗೆ ಬರುತ್ತವೆ ಎಂದು ಸವಾಲು ಹಾಕಿದ್ದಾರೆ.

ಡಿ.ಕೆ. ಶಿವಕುಮಾರ್‌ಗೆ ತಿರುಗೇಟು

ಬಸನಗೌಡ ಪಾಟೀಲ್‌ ಯತ್ನಾಳ್‌ರನ್ನು ಆಸ್ಪತ್ರೆಗೆ ಸೇರಿಸಬೇಕು ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ತಿರುಗೇಟು ನೀಡಿರುವ ಯತ್ನಾಳ್‌, ಅವರು ನಾರಾಯಣ ಹೃದಯಾಲಯಕ್ಕೆ ಸೇರಿಕೊಳ್ಳಲು ಬೆಡ್ ರೆಡಿ ಮಾಡಿಕೊಳ್ಳಬೇಕು. ಭ್ರಷ್ಟಾಚಾರ ಆರೋಪ ಹೊತ್ತಿರುವವರಿಂದ ನಾನೇನು ಸಲಹೆ ಪಡೆಯಲ್ಲ. ನೈತಿಕತೆ ಇದ್ದರೆ ಕ್ಯಾಬಿನೆಟ್‌ನಿಂದ ಯಾಕೆ ಸಿಬಿಐ ಪ್ರಕರಣವನ್ನು ವಾಪಸ್ ಪಡೆಯಬೇಕಿತ್ತು? ಅವರು ವಾಪಸ್ ಪಡೆದ ಹಿನ್ನೆಲೆ‌‌ಯಲ್ಲಿ ನಾನು ಕಾನೂನು ಹೋರಾಟಕ್ಕೆ ಸಿದ್ಧನಾಗಿದ್ದೇನೆ ಎಂದು ಹೇಳಿದರು.

ಅಮಿತ್‌ ಶಾಗೂ ಪತ್ರ ಬರೆದಿದ್ದ ಯತ್ನಾಳ್‌

ತನ್ವೀರ್‌ ಪೀರಾ ಅವರು ಐಸಿಸ್‌ ಜತೆಗೆ ಸಂಬಂಧ ಹೊಂದಿದ್ದಾರೆ ಎಂದು ದೂರಿದ್ದ ಬಸನಗೌಡ ಪಾಟೀಲ್‌ ಯತ್ನಾಳ್‌, ಅದಕ್ಕೆ ಸಂಬಂಧಿಸಿ ಹಲವು ಫೋಟೊ ಮತ್ತು ಮಾಹಿತಿಗಳನ್ನು ಬುಧವಾರ ಬಿಡುಗಡೆ ಮಾಡಿದ್ದರು. ಜತೆ‌ಗೆ ಮೌಲ್ವಿ ಬಗ್ಗೆ ಎನ್‌ಐಎ ತನಿಖೆಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೂ ಪತ್ರ ಬರೆದು ಮನವಿ ಮಾಡಿದ್ದರು.

ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪಗಳೇನು?

  • ತನ್ವೀರ್ ಪೀರಾ ಅನ್ನೋ ಐಸಿಸ್ ಉಗ್ರ ಸಂಘಟನೆಯ ಸಂಪರ್ಕ ಹೊಂದಿರುವ ವ್ಯಕ್ತಿ ಜತೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿರುವ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಬೇಕು. ಹೀಗಾಗಿ ಈ ಪ್ರಕರಣವನ್ನು ಎನ್‌ಐಗೆ ವಹಿಸುವುದು ಸೂಕ್ತ.
  • ತನ್ವೀರ್‌ ಪೀರಾ ಎಂಬ ವ್ಯಕ್ತಿ ಐಸಿಸ್ ನಾಯಕರನ್ನು ಭೇಟಿ ಮಾಡಿದ ಉದ್ದೇಶವನ್ನು ಕಂಡುಹಿಡಿಯಲು, ಅವರ ಪ್ರಯಾಣದ ಖರ್ಚು ವೆಚ್ಚಗಳ ಮೂಲಗಳನ್ನು ಕಂಡುಕೊಳ್ಳಲು, ಹಣಕಾಸು ನಿರ್ವಹಣೆಯಲ್ಲಿ ಆ ವ್ಯಕ್ತಿಯ ಪಾತ್ರ ಏನು ಎಂಬ ಬಗ್ಗೆ ತಿಳಿಯಬೇಕಿದೆ.
  • ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಹಲವಾರು ಸಭೆಗಳಲ್ಲಿ ಪೀರಾ ಕಾಣಿಸಿಕೊಂಡಿದ್ದು, ಎಲ್ಲ ವಿಷಯಗಳ ಬಗ್ಗೆ ತನಿಖೆ ನಡೆಸಲು ಪ್ರಕರಣವನ್ನು ಎನ್ಐಎಗೆ ವಹಿಸಬೇಕು.
  • ಪೀರಾ ಈ ಹಿಂದೆ ಮಧ್ಯಪ್ರಾಚ್ಯ ದೇಶಗಳಲ್ಲಿನ ತೀವ್ರಗಾಮಿ ಇಸ್ಲಾಮಿಕ್ ಸಂಘಟನೆಯ ನಾಯಕರನ್ನು ಭೇಟಿಯಾಗಿರುವ ಬಗ್ಗೆ ನನಗೆ ತಿಳಿದಿದೆ.
  • ನಮ್ಮ ದೇಶದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಉದ್ದೇಶದಿಂದ ಪೀರಾ ಮುಸ್ಲಿಂ ದೇಶಗಳಿಂದ ಹಣವನ್ನು ತರುತ್ತಿದ್ದಾರೆ ಎಂಬ ವಿಶ್ವಾಸಾರ್ಹ ಮಾಹಿತಿಯೊಂದು ನನಗೆ ಸಿಕ್ಕಿದೆ.
  • ಸಿಎಂ ತಮ್ಮ ವೈಯಕ್ತಿಕ ಭದ್ರತೆ ಮತ್ತು ಗುಪ್ತಚರ ಸಲಹೆಯನ್ನು ನಿರ್ಲಕ್ಷಿಸಿದ್ದಾರೆ. ಇಲ್ಲವೇ, ತಮ್ಮ ರಾಜಕೀಯ ಉದ್ದೇಶಕ್ಕಾಗಿ ಪೀರಾ ಅವರನ್ನು ಉದ್ದೇಶಪೂರ್ವಕವಾಗಿ ಭೇಟಿ ಮಾಡಲು ಅನುವು ‌ಮಾಡಿಕೊಟ್ಟಿದ್ದಾರೆ.
  • ಭಯೋತ್ಪಾದನೆಯ ಪರವಾಗಿ ಇರುವ ವ್ಯಕ್ತಿಗಳು ಉನ್ನತ ಮಟ್ಟದ ರಾಜಕೀಯ ನಾಯಕರನ್ನು ಭೇಟಿಯಾಗಲು ಸಾಧ್ಯವಾಗುತ್ತದೆ. ಅದರಲ್ಲೂ ವಿಶೇಷವಾಗಿ ಮಾಧ್ಯಮಗಳು ಮತ್ತು ನಾಗರಿಕರ ಸಮ್ಮುಖದಲ್ಲಿ ಈ ಭೇಟಿಗಳು ನಡೆಯುತ್ತವೆ.
  • ಪೀರಾ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲು ನಮ್ಮ ಸ್ಥಳೀಯ ಪೊಲೀಸರು ಮುಂದಾಗುವುದಿಲ್ಲ. ಕಾರಣ, ಅವರು ರಾಜ್ಯ ಆಡಳಿತದೊಂದಿಗೆ ಶಾಮೀಲಾಗಿದ್ದಾರೆ ಎಂಬುದು ನನ್ನ ಅನುಮಾನವಾಗಿದೆ. ಹೀಗಾಗಿ ಪೀರಾ ಅವರನ್ನು ಎನ್‌ಐಎ ತನಿಖೆ ಆಗಲಿ.

ಮೂಲತಃ ಲೇಖನವನ್ನು ಇಲ್ಲಿ ಪ್ರಕಟಿಸಲಾಗಿದೆ: 👉 Kannada News

ಇಂತಹ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 👉 latest Kannada news

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!