Fighter Banned: ಗಲ್ಫ್ ದೇಶಗಳಲ್ಲಿ ಹೃತಿಕ್ ರೋಷನ್- ದೀಪಿಕಾ ಅಭಿನಯದ ʻಫೈಟರ್‌ʼ ಸಿನಿಮಾ ನಿಷೇಧ!

 ಫಿಲ್ಮ್‌ ಬಿಸ್ನೆಸ್‌ ತಜ್ಞ ಮತ್ತು ನಿರ್ಮಾಪಕರಾದ ಗಿರೀಶ್‌ ಜೋಹಾರ್‌ ಪ್ರಕಾರ ಸದ್ಯ ಯುಎಇ (Fighter Banned) ಹೊರತುಪಡಿಸಿ ಇತರೆ ಗಲ್ಫ್‌ ದೇಶಗಳಲ್ಲಿ ಫೈಟರ್‌ ಸಿನಿಮಾಕ್ಕೆ ಅನುಮತಿ ದೊರಕಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ.


ಬೆಂಗಳೂರು: ಹೃತಿಕ್ ರೋಷನ್ (Hrithik Roshan) ಮತ್ತು ದೀಪಿಕಾ ಪಡುಕೋಣೆ (Deepika Padukone) ಅಭಿನಯದ ʻಫೈಟರ್ʼ ಬಿಡುಗಡೆಗಾಗಿ ಅವರ ಫ್ಯಾನ್ಸ್‌ ತುದಿಗಾಲಲ್ಲಿ ಕಾಯುತ್ತಿದ್ದಾರೆ. ಆದರೆ ಸಿನಿಮಾ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದ ಗಲ್ಫ್ ದೇಶಗಳಲ್ಲಿಯ ವೀಕ್ಷಕರಿಗೆ ಕೆಟ್ಟ ಸುದ್ದಿಯಿದೆ. ಫಿಲ್ಮ್‌ ಬಿಸ್ನೆಸ್‌ ತಜ್ಞ ಮತ್ತು ನಿರ್ಮಾಪಕರಾದ ಗಿರೀಶ್‌ ಜೋಹಾರ್‌ ಪ್ರಕಾರ ಸದ್ಯ ಯುಎಇ (Fighter Banned) ಹೊರತುಪಡಿಸಿ ಇತರೆ ಗಲ್ಫ್‌ ದೇಶಗಳಲ್ಲಿ ಫೈಟರ್‌ ಸಿನಿಮಾಕ್ಕೆ ಅನುಮತಿ ದೊರಕಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ. ಗಲ್ಫ್‌ ದೇಶಗಳಲ್ಲಿ ಫೈಟರ್‌ ಸಿನಿಮಾ ಬಿಡುಗಡೆಯಾಗದೆ ಇರುವುದಕ್ಕೆ ಕಾರಣವೇನೆಂದು ಬಹಿರಂಗವಾಗಿಲ್ಲ.

ಗಿರೀಶ್ ಟ್ವೀಟ್ ಮಾಡಿ ʻʻಫೈಟರ್‌ ಸಿನಿಮಾಗೆ ಒಂದು ಹಿನ್ನಡೆ, ಸಿನಿಮಾ ಮಧ್ಯ ಪ್ರಾಚ್ಯ ದೇಶಗಳಲ್ಲಿ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿಲ್ಲ. ಇದಕ್ಕೆ ಆ ದೇಶಗಳು ಅಧಿಕೃತವಾಗಿ ನಿಷೇಧ ಹೇರಿವೆ. ಪಿಜಿ15 ಕ್ಲಾಸಿಫಿಕೇಷನ್‌ನೊಂದಿಗೆ ಯುಎಇಯಲ್ಲಿ ಮಾತ್ರ ಈ ಸಿನಿಮಾ ಬಿಡುಗಡೆಯಾಗಲಿದೆʼಎಂದು ಬರೆದುಕೊಂಡಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ಹಸಿರು ನಿಶಾನೆ ದೊರಕಿಲ್ಲ. ಈ ಆಕ್ಷನ್ ಥ್ರಿಲ್ಲರ್ ಸಿನಿಮಾ ಜನವರಿ 25ರಂದು ಭಾರತೀಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಹೃತಿಕ್ ರೋಷನ್, ದೀಪಿಕಾ ಪಡುಕೋಣೆ ಮತ್ತು ಅನಿಲ್ ಕಪೂರ್ ಮುಖ್ಯಭೂಮಿಕೆಯಲ್ಲಿದ್ದಾರೆ. ಫೈಟರ್ ಟೀಸರ್‌ನಲ್ಲಿ, ಜೆಟ್‌ ವಿಮಾನವೇರಿ ಸಾಹಸ ಪ್ರದರ್ಶಿಸಿದ್ದಾರೆ ಹೃತಿಕ್‌ ಮತ್ತು ದೀಪಿಕಾ.ವರದಿಯ ಪ್ರಕಾರ, ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಸಿನಿಮಾ 3D ನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಪಠಾಣ್‌ ಮೂಲಕ 1000 ಕೋಟಿಯ ಹಿಟ್‌ ಸಿನಿಮಾ ನೀಡಿರುವ ಸಿದ್ಧಾರ್ಥ್‌ ಆನಂದ್‌, ಫೈಟರ್‌ ಮೂಲಕ ಮತ್ತೊಂದು ಹಿಟ್‌ ಸಿನಿಮಾ ನೀಡಲಿದ್ದಾರೆ. ನಿರ್ದೇಶಕ ಸಿದ್ಧಾರ್ಥ್ ಆನಂದ್ ಒಂದು ನಿಮಿಷ 10 ಸೆಕೆಂಡ್‌ನ ಟೀಸರ್ ಮೂಲಕ ಸಿನಿಮಾದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ. ಪ್ಯಾಟಿ, ಮಿನ್ನಿ ಮತ್ತು ರಾಕಿ ಸ್ಕ್ವಾಡ್ರನ್ ಕೂಡ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

First Published on Vistara News

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!