Laxman Savadi: ಲಕ್ಷ್ಮಣ್ ಸವದಿ ಘರ್ ವಾಪ್ಸಿ? ಮಾತುಕತೆ ಫೈನಲ್, ಮಹತ್ವದ ಸುಳಿವು ಕೊಟ್ಟ ಕತ್ತಿ, ಜೊಲ್ಲೆ!
Laxman Savadi: ಕಿತ್ತೂರು ಕರ್ನಾಟಕ ಭಾಗದಲ್ಲಿ ತಮ್ಮದೇ ಪ್ರಭಾವ ಹೊಂದಿರುವ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ಸೇರ್ಪಡೆ ಮಾಡಿಕೊಂಡರೆ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಕೊಪ್ಪಳದಲ್ಲಿ ಅನುಕೂಲವಾಗುತ್ತದೆ ಎಂಬ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿದೆ.
ಬೆಳಗಾವಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಬಳಿಕ ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Laxman Savadi) ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಈಗ ದಟ್ಟವಾಗಿ ಹರಡುತ್ತಿದೆ. ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ ತಂತ್ರಗಾರಿಕೆಯಲ್ಲಿ ತೊಡಗಿದ್ದು, ಘರ್ ವಾಪ್ಸಿಗೆ (Ghar Wapsi) ಚಾಲನೆ ನೀಡಿದೆ. ಇದರ ಭಾಗವಾಗಿ ಕಿತ್ತೂರು ಕರ್ನಾಟಕ (Kittur Karnataka) ಭಾಗದ ನಾಯಕರಾಗಿರುವ ಲಕ್ಷ್ಮಣ ಸವದಿ ಅವರನ್ನು ಪಕ್ಷಕ್ಕೆ ವಾಪಸ್ ಕರೆತರಲು ಕಸರತ್ತು ತೀವ್ರಗೊಂಡಿದೆ. ಮಾಹಿತಿ ಪ್ರಕಾರ, ಅಂತಿಮ ಹಂತಕ್ಕೆ ಬಂದಿದೆ ಎಂದೇ ಹೇಳಲಾಗುತ್ತಿದೆ.
ಲಕ್ಷ್ಮಣ ಸವದಿಯನ್ನು ಬಿಜೆಪಿ ಕರೆತರುವ ಪ್ರಯತ್ನಕ್ಕೆ ಸಂಬಂಧಪಟ್ಟಂತೆ ಹಾಲಿ ಮತ್ತು ಮಾಜಿ ಸಂಸದರು ಸುಳಿವು ನೀಡಿದ್ದಾರೆ. ಚಿಕ್ಕೋಡಿ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಮಾಜಿ ಸಂಸದ ರಮೇಶ್ ಕತ್ತಿ ಸವದಿ ಸೇರ್ಪಡೆ ಬಗ್ಗೆ ಮಾತನಾಡಿದ್ದಾರೆ.
ಕಿತ್ತೂರು ಕರ್ನಾಟಕ ಭಾಗದಲ್ಲಿ ತಮ್ಮದೇ ಪ್ರಭಾವ ಹೊಂದಿರುವ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ಸೇರ್ಪಡೆ ಮಾಡಿಕೊಂಡರೆ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಕೊಪ್ಪಳದಲ್ಲಿ ಅನುಕೂಲವಾಗುತ್ತದೆ ಎಂಬ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಈಗ ಬಿಜೆಪಿ ವಲಯದಲ್ಲಿ ಪ್ರಯತ್ನಗಳು ಶುರುವಾಗಿವೆ ಎಂದು ಹೇಳಲಾಗುತ್ತಿದೆ.
First Published on Vistara News.

Comments
Post a Comment