Ram Mandir: ಮಂದಿರ ಉದ್ಘಾಟನೆಗೆ ಬರಲಿದ್ದಾರೆ 55 ದೇಶಗಳ ನಾಯಕರು; ಇಲ್ಲಿದೆ ಪಟ್ಟಿ

 Ram Mandir: ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವ ಕಾರ್ಯಕ್ರಮಕ್ಕೆ ಬೇರೆ ದೇಶಗಳ ಗಣ್ಯರು ಕೂಡ ಆಗಮಿಸಲಿದ್ದಾರೆ.


ನವದೆಹಲಿ: ದೇಶಾದ್ಯಂತ ಈಗ ರಾಮನ ಜಪವೇ ಆರಂಭವಾಗಿದೆ. ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಮಮಂದಿರದಲ್ಲಿ (Ram Mandir) ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಮಾಡಲಿದ್ದಾರೆ. ದೇಶಾದ್ಯಂತ ಸಾಧು-ಸಂತರು, ಗಣ್ಯರು, ಸಾಧಕರು ಸೇರಿ ಸಾವಿರಾರು ಗಣ್ಯರು ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾರತದ ಗಣ್ಯರು ಮಾತ್ರವಲ್ಲ, ಸುಮಾರು 55 ದೇಶಗಳ 100ಕ್ಕೂ ಅಧಿಕ ಗಣ್ಯರು ಕೂಡ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ವಿಶ್ವ ಹಿಂದು ಪರಿಷತ್‌ ಜಂಟಿ ಪ್ರಧಾನ ಕಾರ್ಯದರ್ಶಿ ಸ್ವಾಮಿ ವಿವೇಕಾನಂದ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. “ಅಮೆರಿಕ, ಬ್ರಿಟನ್‌ ಸೇರಿ 55 ದೇಶಗಳ ಸಂಸದರು, ರಾಯಭಾರಿಗಳು, ರಾಜತಾಂತ್ರಿಕ ಅಧಿಕಾರಿಗಳು ಸೇರಿ 100ಕ್ಕೂ ಅಧಿಕ ಗಣ್ಯರು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಗಣ್ಯರು ಜನವರಿ 20ರಂದೇ ಲಖನೌಗೆ ಆಗಮಿಸಲಿದ್ದು, ಜನವರಿ 21ರಂದು ಅಯೋಧ್ಯೆಗೆ ತೆರಳಲಿದ್ದಾರೆ. ಅವರಿಗಾಗಿ ಸಕಲ ವ್ಯವಸ್ಥೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಯಾವ ದೇಶಗಳಿಂದ ಗಣ್ಯರ ಆಗಮನ?

ಜರ್ಮನಿ, ಫಿಜಿ, ಫಿನ್‌ಲ್ಯಾಂಡ್‌, ಅಮೆರಿಕ, ಬ್ರಿಟನ್‌, ಜರ್ಮನಿ, ಇಂಡೋನೇಷ್ಯಾ, ಐರ್ಲೆಂಡ್‌, ಜಪಾನ್‌, ಕೀನ್ಯಾ, ಕೊರಿಯಾ, ಮಾರಿಷಸ್‌, ನಾರ್ವೆ ಸೇರಿ 55 ದೇಶಗಳ ಗಣ್ಯರು ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಂಗಾಪುರ, ಸ್ಪೇನ್‌, ಶ್ರೀಲಂಕಾ, ಜಾಂಬಿಯಾ, ವಿಯೇಟ್ನಾಂ, ಉಗಾಂಡ, ವೆಸ್ಟ್‌ ಇಂಡೀಸ್‌ ದೇಶಗಳ ನಾಯಕರು ಕೂಡ ಪಟ್ಟಿಯಲ್ಲಿದ್ದಾರೆ.

ಬಿಗಿ ಬಂದೋಬಸ್ತ್

ರಾಮಮಂದಿರ ಲೋಕಾರ್ಪಣೆಯ ದಿನ ಉತ್ತರ ಪ್ರದೇಶ ಪೊಲೀಸರು ಹಾಗೂ ಪ್ಯಾರಾ ಮಿಲಿಟರಿ ಸಿಬ್ಬಂದಿ ಸೇರಿ ಒಟ್ಟು 11 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಇದರ ಜತೆಗೆ ಹೆಚ್ಚಿನ ನಿಗಾ ಇರಿಸಲು, ಪ್ರತಿಯೊಂದು ಚಲನವಲನಗಳನ್ನು ಗಮನಿಸಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತದೆ. ರಾಮಮಂದಿರ ಉದ್ಘಾಟನೆ ದಿನ ಪ್ರಾಯೋಗಿಕವಾಗಿ ಇದನ್ನು ಬಳಸಿಕೊಳ್ಳಲಾಗುತ್ತದೆ. ಮುಂದಿನ ದಿನಗಳಲ್ಲಿ ಶಾಶ್ವತವಾಗಿ ಇದೇ ತಂತ್ರಜ್ಞಾನ ಅಳವಡಿಸಿಕೊಳ್ಳುವ ಚಿಂತನೆ ಇದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!