Ram Mandir: ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಕ್ರಿಕೆಟ್ ದಿಗ್ಗಜ ಸಚಿನ್!
ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 6,000ಕ್ಕೂ ಹೆಚ್ಚು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ
ಮುಂಬಯಿ: ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರ (Ram Mandir) ಲೋಕಾರ್ಪಣೆಗೆ ಕೆಲವೇ ದಿನಗಳು ಬಾಕಿ ಇವೆ. ಪ್ರಮುಖ ಆಯ್ದ ಗಣ್ಯರಿಗೆ ರಾಮಮಂದಿರ ಉದ್ಘಾಟನೆಯ ಆಹ್ವಾನವನ್ನು ನೀಡಲಾಗುತ್ತಿದೆ. ಇದೀಗ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ, ಭಾರತ ರತ್ನ ಸಚಿನ್ ತೆಂಡೂಲ್ಕರ್(Sachin Tendulkar) ಅವರಿಗೂ ಆಹ್ವಾನವನ್ನು ನೀಡಲಾಗಿದೆ. ಸಚಿನ್ ಈ ಆಹ್ವಾನವನ್ನು ಸಂತಸದಿಂದಲೇ ಸ್ವೀಕರಿಸಿದ್ದಾರೆ.
ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 6,000ಕ್ಕೂ ಹೆಚ್ಚು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆಹ್ವಾನ ಸ್ವೀಕರಿಸಿದ ಸಚಿನ್ ಕೂಡ ಈ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಅಧಿಕವಾಗಿದೆ.ಸೆಪ್ಟೆಂಬರ್ನಲ್ಲಿ ವಾರಣಾಸಿಯಲ್ಲಿ ಶಂಕುಸ್ಥಾಪನೆಗೊಂಡ ಅಂತಾರಾಷ್ಟ್ರೀಯ(international cricket stadium in Varanasi) ಕ್ರಿಕೆಟ್ ಸ್ಟೇಡಿಯಂನ ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್ ಅವರು ಗಣ್ಯ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದರು. ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಭಾರತೀಯ ಕ್ರಿಕೆಟ್ ಮಂಡಳಿಯ ವತಿಯಿಂದ ಸಚಿನ್ ತೆಂಡೂಲ್ಕರ್ ಅವರು “ನವೋ” ಎಂದು ಬರೆದ ಟೀಮ್ ಇಂಡಿಯಾ ಜೆರ್ಸಿಯನ್ನು ನೀಡಿ ಗೌರವಿಸಿದ್ದರು. ಶಿವನ ಮಾದರಿಯಲ್ಲಿ ಈ ಸ್ಟೇಡಿಯಂ ನಿರ್ಮಾಣವಾಗುತ್ತಿದೆ.

Comments
Post a Comment