Ram Mandir: ರಾಜ್ಯಾದ್ಯಂತ ಬಿಜೆಪಿ ಸ್ವಚ್ಛತೀರ್ಥ ಅಭಿಯಾನ; ಬಿ.ವೈ. ವಿಜಯೇಂದ್ರ ಸೇರಿ ಹಲವರಿಂದ ದೇಗುಲಗಳ ಸ್ವಚ್ಛತೆ
ರಾಜ್ಯ ಬಿಜೆಪಿಯಿಂದ ಭಾನುವಾಋ ರಾಜ್ಯಾದ್ಯಂತ ದೇಗುಲಗಳಲ್ಲಿ “ಸ್ವಚ್ಛತೀರ್ಥ ಅಭಿಯಾನ”ವನ್ನು ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿ ಹಲವು ನಾಯಕರು ತಮ್ಮ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿನ ದೇಗುಲಗಳನ್ನು ಸ್ವಚ್ಛಗೊಳಿಸಿದರು.
ಬೆಂಗಳೂರು/ಶಿವಮೊಗ್ಗ: ಅಯೋಧ್ಯೆ ರಾಮಜನ್ಮಭೂಮಿಯ (Ram Janmabhoomi) ರಾಮ ಮಂದಿರದಲ್ಲಿ (Ram Mandir) ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಿಂದ ರಾಜ್ಯಾದ್ಯಂತ ದೇಗುಲಗಳಲ್ಲಿ “ಸ್ವಚ್ಛತೀರ್ಥ ಅಭಿಯಾನ”ವನ್ನು ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಹುಚ್ಚರಾಯ ಸ್ವಾಮಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನೆರವೇರಿಸಿದರೆ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಬೆಂಗಳೂರಿನ ಜಯನಗರ 4ನೇ ಹಂತದ ಶ್ರೀ ವಿನಾಯಕ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದರು. ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಬೆಂಗಳೂರಿನ ಮಲ್ಲೇಶ್ವರದ ಕೋದಂಡರಾಮ ದೇವಸ್ಥಾನವನ್ನು ಸ್ವಚ್ಛಗೊಳಿಸಿದರು.
ಶಿಕಾರಿಪುರದ ಹುಚ್ಚರಾಯ ಸ್ವಾಮಿ ದೇವಸ್ಥಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸ್ವಚ್ಛತಾ ಕಾರ್ಯವನ್ನು ನೆರವೇರಿಸಿದರು. ವಿಜಯೇಂದ್ರ ಅವರಿಗೆ ಬಿಜೆಪಿ ಕಾರ್ಯಕರ್ತರು ಸಾಥ್ ನೀಡಿದರು. ಹುಚ್ಚರಾಯಸ್ವಾಮಿ ದೇವಸ್ಥಾನ ಆವರಣವನ್ನು ಗುಡಿಸಿ, ನೀರು ಹಾಕಿ ಸ್ವಚ್ಛಗೊಳಿಸಲಾಯಿತು.
First Published on Vistara News.


Comments
Post a Comment