Ram Mandir: ನಾಳೆಯಿಂದ ಸಾರ್ವಜನಿಕರಿಗೆ ರಾಮ ಮಂದಿರ ಮುಕ್ತ; ಆರತಿ, ದರ್ಶನಕ್ಕೆ ಸಮಯ ನಿಗದಿ
Ram Mandir: ಸೋಮವಾರ ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಅಯೋಧ್ಯಾ: ಅಯೋಧ್ಯೆಯ ರಾಮ ಮಂದಿರ (Ayodhya Ram Mandir) ಉದ್ಘಾಟನೆಯ ಸೋಮವಾರ ನಡೆದಿದ್ದು, ಭಾರತದ ಪಾಲಿಗೆ ಇದೊಂದು ಐತಿಹಾಸಿಕ ಕ್ಷಣವಾಗಿದೆ. ಜ.22, ಸೋಮವಾರ ಉದ್ಘಾಟನೆಯಾಗಿರುವ ರಾಮ ಮಂದಿರವು ಜ.23, ಮಂಗಳವಾರದಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ(Opens To Public). ಜನರು ರಾಮ ಲಲ್ಲಾನ (Ram Lalla)ದರ್ಶನವನ್ನು ಪಡೆದುಕೊಳ್ಳಬಹುದು. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೋಮವಾರ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಈ ವೇಳೆ, ಬಾಲಿವುಡ್ ಗಣ್ಯರಾದ ಕತ್ರಿನಾ ಕೈಫ್, ವಿಕ್ಕಿ ಕೌಶಲ್, ಆಲಿಯಾ ಭಟ್, ರಣಬೀರ್ ಕಪೂರ್ ಹಾಗೂ ಉದ್ಯಮಿ ದಂಪತಿ ಮುಕೇಶ್ ಅಂಬಾನಿ, ನೀತಾ ಅಂಬಾನಿ ಕೂಡ ಹಾಜರಿದ್ದರು.
ಅಯೋಧ್ಯೆಯ ರಾಮ ಮಂದಿರವು ಹಿಂದೂಗಳಿಗೆ ಅತ್ಯಂತ ಪವಿತ್ರವಾದ ಯಾತ್ರಾ ಸ್ಥಳಗಳಲ್ಲಿ ಒಂದಾಗಿದ್ದು, ಭಗವಾನ್ ರಾಮನ ಜನ್ಮಸ್ಥಳವೆಂದು ನಂಬಲಾಗಿದೆ. ಇದನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ನಿರ್ವಹಿಸುತ್ತದೆ.
First Published on Vistara News.

Comments
Post a Comment