Republic Day 2023: ನರೇಗಾದಡಿ ಭೀಮ್‌ಕೋಲ್ ಕೆರೆ ಅಭಿವೃದ್ಧಿ, ಕೆರೆ ದಂಡೆಯಲ್ಲೇ ನಡೆಯಿತು ಗಣರಾಜ್ಯೋತ್ಸವ

Republic Day 2023: ಭೀಮ್‌ಕೋಲ್ ಕೆರೆ ದಂಡೆಯ ಮೇಲೆ ಗ್ರಾಮದ ಹಿರಿಯ ನಾಗರಿಕರಾದ ಶಾಂತಾರಾಮ್ ಥಾಮಸೆ ಅವರಿಂದ ಧ್ವಜಾರೋಹಣವನ್ನು ನೆರವೇರಿಸಲಾಯಿತು.


 ಕಾರವಾರ: ತಾಲೂಕಿನ ಹಣಕೋಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಟೆಗಾಳಿ ಗ್ರಾಮದಲ್ಲಿ ಭೀಮ್‌ಕೋಲ್ ಕೆರೆ ದಂಡೆಯ ಮೇಲೆ ಗಣರಾಜ್ಯೋತ್ಸವ ಆಚರಿಸಲಾಯಿತು (Republic Day 2023). ಗ್ರಾಮದ ಹಿರಿಯ ನಾಗರಿಕರಾದ ಶಾಂತಾರಾಮ್ ಥಾಮಸೆ ಅವರು ಧ್ವಜಾರೋಹಣವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಾಲಪ್ಪನವರ ಆನಂದ ಕುಮಾರ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ ಹಾಗೂ ಗಣತಂತ್ರ ವ್ಯವಸ್ಥೆ ಜಾರಿಯಾಗಿ 74 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೇಶಾದ್ಯಂತ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಅಲ್ಲದೇ ಕೇಂದ್ರ ಸರಕಾರ ಅಮೃತ ಸರೋವರ ಅಭಿಯಾನ ಹಮ್ಮಿಕೊಂಡಿದ್ದು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಪಂ ಸಿಇಒ ಅವರ ಮಾರ್ಗದರ್ಶನದಲ್ಲಿ ಭೀಮ್‌ಕೋಲ್ ಕೆರೆ ಅಭಿವೃದ್ಧಿಪಡಿಸಲಾಗಿದೆ. ಈ ಅಭಿವೃದ್ಧಿ ಕಾಮಗಾರಿಯಲ್ಲಿ ತಾಲೂಕು, ಗ್ರಾಮ ಪಂಚಾಯಿತಿ ಹಾಗೂ ನರೇಗಾ ಸಿಬ್ಬಂದಿ ಸಾಕಷ್ಟು ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ ಎಂದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!