republic day : ಯೋಧರ ಮನೆ ಮಂದಿಗೆ ಕ್ರಿಕೆಟ್ ಪಂದ್ಯಕ್ಕೆ ಫ್ರೀ ಟಿಕೆಟ್​​!

Ind vs Eng : ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಹೈದರಾಬಾದ್​ನಲ್ಲಿ ಜನವರಿ 25ರಂದು ಆರಂಭವಾಗಲಿದೆ.

 

ವಿಸ್ತಾರನ್ಯೂಸ್​ ಬೆಂಗಳೂರು : ಮುಂಬರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಗಣರಾಜ್ಯೋತ್ಸವದಂದು (republic day ) ಭಾರತೀಯ ಸೇನಾ ಸಿಬ್ಬಂದಿಯ ಕುಟುಂಬಗಳ ಸದಸ್ಯರಿಗೆ ಉಚಿತ ಪ್ರವೇಶ ನೀಡುವುದಾಗಿ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ (HCA) ಘೋಷಿಸಿದೆ. ಜನವರಿ 25ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಗೆ ಹೈದಾರಾಬಾದ್ ಕ್ರಿಕೆಟ್​ ಸಂಸ್ಥೆ ಆತಿಥ್ಯ ವಹಿಸಲಿದೆ. ಉದ್ಘಾಟನಾ ಪಂದ್ಯ ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಗಣರಾಜ್ಯೋತ್ಸವದ ಖುಷಿಯನ್ನು ಸಂಭ್ರಮಿಸಲು ಹಾಗೂ ಯೋಧರ ಸೇವೆಯನ್ನು ಗೌರವಿಸಲು ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ನೇತೃತ್ವದ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್, ಆ ನಿರ್ದಿಷ್ಟ ದಿನದಂದು ಭಾರತೀಯ ಸಶಸ್ತ್ರ ಪಡೆಗಳ ಕುಟುಂಬಗಳಿಗೆ ಉಚಿತ ಪ್ರವೇಶವನ್ನು ನೀಡಲು ನಿರ್ಧರಿಸಿದೆ.

ಯೋಧರ ಕುಟುಂಬಗಳಿಗೆ ಉಚಿತ ಪ್ರವೇಶ ನೀಡುವ ನಿರ್ಧಾರವು ದೇಶವನ್ನು ಕಾಪಾಡುವವರ ಕುಟುಂಬದ ಸದಸ್ಯರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ವಿಶೇಷ ಮಾರ್ಗವಾಗಿದೆ. ಗಣರಾಜ್ಯೋತ್ಸವವು ಭಾರತದಲ್ಲಿ ಅಪಾರ ಮಹತ್ವವನ್ನು ಹೊಂದಿದೆ. ಅದನ್ನು ಕ್ರಿಕೆಟ್ ಪಂದ್ಯದೊಂದಿಗೆ ಸಂಯೋಜಿಸಿ ಆಚರಿಸುವುದು ವಿಶೇಷವಾಗಿದೆ.

First Published On Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!