7ನೇ ವೇತನ ಆಯೋಗದ ವರದಿ ಬಂದ ನಂತರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಸಿಎಂ ಭರವಸೆ
ಬೆಂಗಳೂರಿನಲ್ಲಿ ಸೋಮವಾರ ನಡೆದ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಬೆಂಗಳೂರು: ಪಂಚ ಗ್ಯಾರಂಟಿಗಳ ಜಾರಿಯಿಂದ ಉಂಟಾದ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭರವಸೆ ನೀಡಿದ್ದಾರೆ.
ನಗರದಲ್ಲಿ ಮಂಗಳವಾರ ನಡೆದ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ (Govt Employees Conference) ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. ಎನ್‌ಪಿಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Comments
Post a Comment