Budget Session : ನಮ್ಮ ಪಾಲು ಕೇಳೋದು ತಪ್ಪಾ, ಮೋದಿ ಸಿಎಂ ಆಗಿದ್ದಾಗ ಕೇಳಿಲ್ವಾ?; ಸಿದ್ದರಾಮಯ್ಯ

 Budget Session : ನರೇಂದ್ರ ಮೋದಿ ಅವರೇ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯಕ್ಕೆ 50% ಪಾಲು ಕೊಡಬೇಕು ಎಂದು ಕೇಳಿದ್ದರು. ಈಗ ಅವರು ಕೊಡಬೇಕಲ್ವಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.


ಬೆಂಗಳೂರು: ನಮ್ಮ ರಾಜ್ಯಕ್ಕೆ ಬರಬೇಕಾಗಿರುವ ಪಾಲನ್ನು ಕೇಳುವುದು ತಪ್ಪಾ? (Is Asking for Share is wrong?) ನರೇಂದ್ರ ಮೋದಿ (PM Narendra Modi) ಅವರು ಮುಖ್ಯಮಂತ್ರಿಯಾಗಿದ್ದಾಗ ಶೇ. 50ರಷ್ಟು ತೆರಿಗೆ ಪಾಲು ರಾಜ್ಯಕ್ಕೆ ವಾಪಾಸ್ ಕೊಡಿ ಎಂದು ಕೇಂದ್ರವನ್ನು ಕೇಳಿರಲಿಲ್ಲವೇ? ಈ ನಾವು ಕೇಳಿದರೆ ತಪ್ಪು ಹೇಗಾಗುತ್ತದೆ? – ಹೀಗೊಂದು ನೇರ ಪ್ರಶ್ನೆ ಕೇಳಿದ್ದಾರೆ ಸಿಎಂ ಸಿದ್ದರಾಮಯ್ಯ (CM Siddaramaiah).

ವಿಧಾನಸಭೆಯಲ್ಲಿ ಮಂಗಳವಾರ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ (Budget Session) ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಮೋದಿ ಅವರು ಮುಖ್ಯಮಂತ್ರಿಯಾಗಿದ್ದಾಗ ಶೇ 50ರಷ್ಟು ತೆರಿಗೆ ಪಾಲು ರಾಜ್ಯಕ್ಕೆ ವಾಪಸ್ ಕೊಡಿ ಎಂದು ಕೇಳಿದ್ದರು. ಈಗ ನಾವು ಕಟ್ಟುವ ಪ್ರತಿ ನೂರು ರೂಗೆ 12-13 ರೂ ಮಾತ್ರ ವಾಪಸ್ ಬರುತ್ತಿದೆ. ಇದು ಅವರಿಗೆ ಅರ್ಥವಾಗುತ್ತಿಲ್ಲವೇ? ಈ ಅನ್ಯಾಯಗಳ ಬಗ್ಗೆ ನಮ್ಮ ಸಂಸದರು ಬಾಯಿಯನ್ನೇ ಬಿಡುವುದಿಲ್ಲ. ಗಡಗಡ ನಡುಗುತ್ತಾರೆ ಎಂದು ವ್ಯಂಗ್ಯವಾಡಿದರು.

ನಮ್ಮದು Good Economics ಎಂದ ಸಿದ್ದರಾಮಯ್ಯ

ಶ್ರೀಮಂತರಿಂದ ತೆರಿಗೆಯನ್ನು ಕಾನೂನು ರೀತಿ ಸಂಗ್ರಹಿಸಿ, ಬಡವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುತ್ತಿರುವುದು good economics. ನಾನು good economics ನಲ್ಲಿ ನಂಬಿಕೆಯಿಟ್ಟಿರುವವನು. ಮುಂದಿನ ವರ್ಷಕ್ಕೆ ಗ್ಯಾರಂಟಗಳಿಗೆ 52,009 ಕೋಟಿ ಮೀಸಲಿಟ್ಟಿದ್ದೇವೆ ಸಿದ್ದರಾಮಯ್ಯ ತಿಳಿಸಿದರು...

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!