Caste Census report: ಜಾತಿ ಗಣತಿ ವರದಿಗೆ ಕಾಂಗ್ರೆಸ್‌ನಲ್ಲಿ ಅಪಸ್ವರ; ಒಪ್ಪಲ್ಲವೆಂದ ಕುಲಕರ್ಣಿ, ದೋಷವಿದೆ ಅಂದ್ರು ಲಕ್ಷ್ಮಿ
Caste Census report: ಜಾತಿಗಣತಿ ವರದಿ ಸ್ವೀಕಾರಕ್ಕೆ ಕಾಂಗ್ರೆಸ್‌ನಲ್ಲಿಯೇ ಅಪಸ್ವರಗಳು ಕೇಳಿ ಬರುತ್ತಿವೆ. ಕಾಂಗ್ರೆಸ್ ಶಾಸಕರು ಹಾಗೂ ಸಚಿವರಿಂದ ತೀವ್ರ ವಿರೋಧಗಳು ವ್ಯಕ್ತವಾಗತೊಡಗಿವೆ. ಇದನ್ನು ಒಪ್ಪುವುದೇ ಇಲ್ಲ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದ್ದರೆ, ವರದಿಯಲ್ಲಿ ದೋಷಗಳಿವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಂಗಳೂರು: ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೊಳಗೊಂಡ ಜಾತಿ ಗಣತಿ ವರದಿಯನ್ನು (Caste Census report) ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಅಧಿಕೃತವಾಗಿ ಸ್ವೀಕಾರ ಮಾಡಿದ್ದಾರೆ. ಆದರೆ, ಇದಕ್ಕೆ ಈಗ ಕಾಂಗ್ರೆಸ್‌ನಲ್ಲಿಯೇ ಅಪಸ್ವರಗಳು ಕೇಳಿ ಬರುತ್ತಿವೆ. ಕಾಂಗ್ರೆಸ್ ಶಾಸಕರು ಹಾಗೂ ಸಚಿವರಿಂದ ತೀವ್ರ ವಿರೋಧಗಳು ವ್ಯಕ್ತವಾಗತೊಡಗಿವೆ. ಇದನ್ನು ಒಪ್ಪುವುದೇ ಇಲ್ಲ ಎಂದು ಶಾಸಕ ವಿನಯ್ ಕುಲಕರ್ಣಿ (Vinay Kulakarni) ಹೇಳಿದ್ದರೆ, ವರದಿಯಲ್ಲಿ ದೋಷಗಳಿವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.
ಕಾಂತರಾಜು ಆಯೋಗದ ವರದಿ ಸಲ್ಲಿಕೆ ಕುರಿತು ಕಾಂಗ್ರೆಸ್ ಹಿರಿಯ ಶಾಸಕ ವಿನಯ್ ಕುಲಕರ್ಣಿ ವಿಸ್ತಾರ ನ್ಯೂಸ್ ಜತೆಗೆ ಮಾತನಾಡಿ ತಮ್ಮ ವಿರೋಧವನ್ನು ದಾಖಲಿಸಿದ್ದಾರೆ. ನಾವು ಜಾತಿಗಣತಿ ವಿರೋಧಿ ಅಲ್ಲ. ಆದರೆ, ಈ ವರದಿಯನ್ನು ನಾವು ಒಪ್ಪಲ್ಲ. ನಮ್ಮ ಲಿಂಗಾಯತ ಸಮುದಾಯಕ್ಕೆ ಸೇರಿದ ಸಣ್ಣ ಉಪ ಪಂಗಡವನ್ನು ಕೈ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ನಾವು ಈ ವರದಿಯನ್ನು ಒಪ್ಪಲ್ಲ ಎಂದು ಹೇಳಿದ್ದಾರೆ.

Comments
Post a Comment