‌Caste Census Report: ಜಾತಿ ಗಣತಿ ಸ್ವೀಕಾರದ ಹಿಂದೆ ಸಿದ್ದರಾಮಯ್ಯ ಪ್ಲ್ಯಾನ್‌ ಏನು? ಕಾರಣ ಬಿಚ್ಚಿಟ್ಟಿದ್ದಾರೆ ಸುನಿಲ್‌ ಕುಮಾರ್!

 Caste Census Report: ಸಿಎಂ ಸಿದ್ದರಾಮಯ್ಯ ಪಲಾಯನವಾದ ಮಾಡಿದ್ದಾರೆ. ಈ ಪಲಾಯನವಾದ ಸಾಕು. ಬದ್ಧತೆ ಇದ್ದರೆ ತಕ್ಷಣ ಸಂಪುಟ ಸಭೆಯಲ್ಲಿ ವರದಿ ಸ್ವೀಕರಿಸಿ, ಚರ್ಚೆ ನಡೆಸುವುದಕ್ಕೆ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಿರಿ ಎಂದು ವಿ. ಸುನಿಲ್‌ ಕುಮಾರ್ ಸವಾಲು ಹಾಕಿದ್ದಾರೆ.


ಬೆಂಗಳೂರು: ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೊಳಗೊಂಡ (Social and Economic Survey) ಜಾತಿ ಗಣತಿ ವರದಿಯನ್ನು (Caste Census report) ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಅಧಿಕೃತವಾಗಿ ಈಗ ಸ್ವೀಕಾರ ಮಾಡಿದ್ದಾರೆ. ಆದರೆ, ಈ ಮೂಲಕ ಸಿದ್ದರಾಮಯ್ಯ ಅವರು ಗೊಂದಲವನ್ನು ಸೃಷ್ಟಿ ಮಾಡಿದ್ದಾರೆ. ಈ ವರದಿಯ ಸ್ವರೂಪ ಏನೆಂಬುದು ಮೊದಲು ನಿರ್ಧಾರ ಆಗಬೇಕಿದೆ. ಜಾರಿಗೆ ಮುನ್ನ ವಿಸ್ತೃತ ಚರ್ಚೆ ಆಗಬೇಕಿದೆ. ಸಿಎಂಗೆ ಬದ್ಧತೆ ಇದ್ದಿದ್ದರೆ ರಾಜ್ಯಪಾಲರ ಭಾಷಣ ಮುಗಿದ ತಕ್ಷಣವೇ ವರದಿಯನ್ನು ಸ್ವೀಕರಿಸಿ ಸದನದಲ್ಲಿ ಮಂಡಿಸಬೇಕಿತ್ತು. ಇಲ್ಲಿ ನಿಮ್ಮ ಉದ್ದೇಶ ಗೊಂದಲವನ್ನು ಜೀವಂತವಾಗಿಡುವುದಷ್ಟೇ ಆಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನಿಲ್‌ ಕುಮಾರ್‌ (V Sunil Kumar) ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸುನಿಲ್‌ ಕುಮಾರ್‌, ಸಿಎಂ ಸಿದ್ದರಾಮಯ್ಯ ಪಲಾಯನವಾದ ಮಾಡಿದ್ದಾರೆ. ಈ ಪಲಾಯನವಾದ ಸಾಕು. ಬದ್ಧತೆ ಇದ್ದರೆ ತಕ್ಷಣ ಸಂಪುಟ ಸಭೆಯಲ್ಲಿ ವರದಿ ಸ್ವೀಕರಿಸಿ, ಚರ್ಚೆ ನಡೆಸುವುದಕ್ಕೆ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಎಂದು ಸವಾಲು ಹಾಕಿದ್ದಾರೆ.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!