Caste Census : ಜಾತಿ ಗಣತಿ ವರದಿಗೆ ಭಾರಿ ಅಪಸ್ವರ; ಅವೈಜ್ಞಾನಿಕ ಎಂದ ಸಿದ್ದಗಂಗಾ ಶ್ರೀ

 Caste Census : ಜಾತಿ ಗಣತಿ ವರದಿ ಮತ್ತೆ ಸುದ್ದಿ ಮಾಡುತ್ತಿದೆ. ಅದು ಮಂಡನೆಯಾಗುತ್ತಿದ್ದಂತೆಯೇ ಅದು ಅವೈಜ್ಞಾನಿಕ ಎಂಬ ಆಪಾದನೆಗಳಿಗೆ ಮತ್ತೆ ಚಾಲನೆ ಸಿಕ್ಕಿದೆ.


ಬೆಂಗಳೂರು: ಬಹು ವಿವಾದಿತ ಜಾತಿ ಗಣತಿ ವರದಿಯನ್ನು (Caste Census report) ಕೊನೆಗೂ ರಾಜ್ಯ ಸರ್ಕಾರ ಸ್ವೀಕಾರ ಮಾಡಿದೆ. ಇದರ ನಡುವೆಯೇ ಈ ವರದಿ ಅವೈಜ್ಞಾನಿಕ ಎಂಬ ಅಪಸ್ವರ ಮತ್ತೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಆಯೋಗದ (Backward Classes Commission) ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ (Jayaprakash Hegde) ಅವರಿಂದ ಸ್ವೀಕಾರ ಮಾಡಿದ ಈ ವರದಿಯ ಬಗ್ಗೆ ಮೊದಲಿನಿಂದಲೂ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದಿಂದ ಆಕ್ಷೇಪವಿದೆ. ವರದಿ ಮಂಡನೆಯಾಗುತ್ತಿದ್ದಂತೆಯೇ ಪ್ರತಿಕ್ರಿಯಿಸಿರುವ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ (Siddalinga swameeji) ಅವರು, ಇದು ವೈಜ್ಞಾನಿಕವಾಗಿಲ್ಲ ಎಂಬ ಪರೋಕ್ಷ ಅಭಿಪ್ರಾಯ ವ್ಯಕ್ತಪಡಿಸಿದರು.

ʻʻಜಾತಿ ಗಣತಿ‌ ವಿಚಾರದಲ್ಲಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೋ ಗೊತ್ತಿಲ್ಲ. ಇದಕ್ಕೆ ಯಾರೂ ವಿರೋಧ ಮಾಡಲು ಸಾಧ್ಯವಿಲ್ಲ. ಯಾಕೆಂದರೆ ಜಾತಿ ಆಧಾರದ ಮೇಲೆ ಸವಲತ್ತುಗಳನ್ನು ಕೊಡಬೇಕಾಗುತ್ತದೆ. ಈ ವರದಿಯನ್ನು ವೈಜ್ಞಾನಿಕವಾಗಿ ರೂಪಿಸಲಾಗಿಲ್ಲ ಎಂಬ ಮಾತು ಕೇಳಿಬರುತ್ತಿದೆʼʼ ಎಂದು ಶ್ರೀಗಳು ಹೇಳಿದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!