Kannada Name Board : ಕನ್ನಡ ನಾಮಫಲಕ ನಿಯಮ ಜಾರಿ ಆಗ್ಲೇಬೇಕು; ಸಚಿವ ತಂಗಡಗಿ ಆದೇಶ

 Kannada Name Board : ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ ನಿಯಮ ಜಾರಿಗೆ ಸರಿಯಾದ ಕ್ರಮ ಕೈಗೊಳ್ಳುವಂತೆ ಸಚಿವ ಶಿವರಾಜ್‌ ತಂಗಡಗಿ ಸೂಚಿಸಿದರು. ಬಿಬಿಎಂಪಿ ಆಯುಕ್ತರು ಪಾಲಿಕೆಯ ಪ್ಲ್ಯಾನ್‌ ವಿವರಿಸಿದರು.


ಬೆಂಗಳೂರು: ಬೆಂಗಳೂರಿನ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ (Kannada Name board) ಶೇ.60ರಷ್ಟು ಕನ್ನಡ ಕಡ್ಡಾಯವಾಗಿ ಬಳಸುವ ಸಂಬಂದ ಕ್ರಮ ಕೈಗೊಳ್ಳುವಂತೆ ಪಾಲಿಕೆ‌ ಆಯುಕ್ತರಿಗೆ (BBMP Commissioner) ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾ ಣ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ (Minister Shivaraja Tangadagi) ಅವರು ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ಬಿಬಿಎಂಪಿ‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾಧಿಕಾರಿಗಳ ಸಭೆ ನಡೆಸಿ ಅವರು ಈ ಸೂಚನೆ ನೀಡಿದರು.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ ಅನ್ವಯ ಬೆಂಗಳೂರು ಹಾಗೂ ರಾಜ್ಯದ ಎಲ್ಲ ಅಂಗಡಿ ಮುಂಗಟ್ಟುಗಳು, ಕಂಪನಿಗಳು, ಸಂಸ್ಥೆಗಳು, ವಾಣಿಜ್ಯ ಮಳಿಗೆಗಳು, ಕಾರ್ಖಾನೆಗಳು, ಸಂಘ ಸಂಸ್ಥೆ, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲ ರೀತಿಯ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯ ಮಾಡಲಾಗಿದ್ದು, ಇದನ್ನು ಅಳವಡಿಸಲು ಫೆ.28 ಕೊನೆಯ ದಿನವಾಗಿದೆ. ಈ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು, ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಅವರು ತಿಳಿಸಿದ್ದಾರೆ.

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ ವಿಚಾರದಲ್ಲಿ ಬಿಬಿಎಂಪಿ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವ ಶಿವರಾಜ್ ತಂಗಡಗಿ ಅವರು ಇದು ಮೊದಲು ಬೆಂಗಳೂರಿನಲ್ಲಿ ಜಾರಿಗೆ ಬರಬೇಕು, ಮುಂದೆ ಶೀಘ್ರವೇ ಗಡಿಜಿಲ್ಲೆ ಹಾಗೂ ಎಲ್ಲಾ ಪಾಲಿಕೆ‌ ವ್ಯಾಪ್ತಿಯಲ್ಲಿ ಸಭೆ ಮಾಡಲಾಗುವುದು ಎಂದು ಹೇಳಿದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!