Karnataka Budget 2024 : ನಂ. 1 ಬಜೆಟ್; ಸಿದ್ದು ಆಯವ್ಯಯ ಹಾಡಿ ಹೊಗಳಿದ ಸೋಮಶೇಖರ್‌

 Karnataka Budget 2024 : ಸಿದ್ದರಾಮಯ್ಯ ಅವರು ನಂಬರ್‌ 1 ಬಜೆಟ್‌ ಮಂಡಿಸಿದ್ದಾರೆ ಎಂದು ಹೊಗಳುವ ಮೂಲಕ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಅವರು ಕಮಲ ಪಾಳಯದ ಹೊಟ್ಟೆ ಉರಿಸಿದ್ದಾರೆ!


ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್‌ನ್ನು (Karnataka Budget 2024) ಬಿಜೆಪಿ ನಾಯಕರೆಲ್ಲ ಟೀಕೆ ಮಾಡುತ್ತಿದ್ದರೆ ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖರ್‌ (ST Somashekhar) ಅವರು ಮಾತ್ರ ಬಜೆಟ್‌ನ್ನು ಹಾಡಿ ಹೊಗಳಿದ್ದಾರೆ. ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ಅವರು ನಂಬರ್ ಒನ್ ಬಜೆಟ್ ಕೊಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ನಾನು ಸಿಎಂ ಮತ್ತು ಡಿಸಿಎಂ ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಏಕೆಂದರೆ, ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಕಸದ ಘಟಕಗಳು ಹೊರಕ್ಕೆ ಹಾಕಿದ್ದಾರೆ ಎಂದು ಖುಷಿಯಿಂದ ಹೇಳಿದ್ದಾರೆ. ನಾನು ಅಭಿಪ್ರಾಯ ಹೇಳುತ್ತಿರುವುದು ಬೆಂಗಳೂರಿಗೆ ಸಂಬಂಧಿಸಿದಂತೆ ಮಾತ್ರ ಎಂದಿದ್ದಾರೆ ಸೋಮಶೇಖರ್‌.

ದೈಹಿಕವಾಗಿ ಬಿಜೆಪಿಯಲ್ಲಿದ್ದರೂ ಮಾನಸಿಕವಾಗಿ ಅದರಿಂದ ದೂರವಾಗಿ ಕಾಂಗ್ರೆಸ್‌ ಜತೆಗೆ ಇರುವ ಸೋಮಶೇಖರ್‌ ಅವರು ಬಜೆಟ್‌ ಪ್ರತಿಕ್ರಿಯೆ ಮೂಲಕವೂ ಬಿಜೆಪಿ ನಾಯಕರಿಗೆ ಮುಜುಗರ ಉಂಟು ಮಾಡಿದ್ದಾರೆ. ಬಜೆಟ್‌ ಅಧಿವೇಶನದ ಮೊದಲ ದಿನ ಎಲ್ಲ ಬಿಜೆಪಿ ಶಾಸಕರು ಕೇಸರಿ ಶಾಲು ಹಾಕಿಕೊಂಡು ಬಂದಿದ್ದರೆ ಸೋಮಶೇಖರ್‌ ಅವರೊಬ್ಬರೇ ಶಾಲು ಹಾಕದೆ ಬಂದಿದ್ದರು. ಬಳಿಕ ನಡೆದ ಬಿಜೆಪಿ ಶಾಸಕಾಂಗ ಪಕ್ಷ ಸಭೆಯಲ್ಲೂ ಅವರು ಭಾಗವಹಿಸಿರಲಿಲ್ಲ.‌ ಅದರ ನಡುವೆ ವಿಧಾನ ಪರಿಷತ್‌ ಚುನಾವಣೆಯ ಪ್ರಚಾರದಲ್ಲೂ ಬಿಜೆಪಿಯಿಂದ ದೂರವಿದ್ದು ಕಾಂಗ್ರೆಸ್‌ ಅಭ್ಯರ್ಥಿಯ ಜತೆ ಕಾಣಿಸಿಕೊಂಡಿದ್ದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!