Karnataka Budget 2024 : ಬಜೆಟ್ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ! 2021ರಲ್ಲೇ ಸಿದ್ದು ಇತಿಹಾಸ ಸೃಷ್ಟಿಸಿದ್ದರು!
Karanataka Budget 2024: ಬಜೆಟ್ ಬಹಿಷ್ಕಾರ ಇತಿಹಾಸದಲ್ಲೇ ಮೊದಲು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಬಿಜೆಪಿ ಗೇಲಿ ಮಾಡಿದೆ. ಸಿದ್ದರಾಮಯ್ಯ ಅವರೇ 2021ರಲ್ಲಿ ಬಜೆಟ್ ಬಹಿಷ್ಕರಿಸಿದ್ದರು ಎಂದು ನೆನಪಿಸಿದೆ.
ಬೆಂಗಳೂರು: ರಾಜ್ಯ ವಿಧಾನ ಮಂಡಲದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್‌ನ್ನು (Karnataka Budget 2024) ಪ್ರತಿಪಕ್ಷ ಬಿಜೆಪಿ ಬಹಿಷ್ಕರಿಸಿದೆ. ಸಿದ್ದರಾಮಯ್ಯ ಅವರು ಭಾಷಣ ಆರಂಭ ಮಾಡುತ್ತಲೇ ʻಏನಿಲ್ಲ.. ಏನಿಲ್ಲ.. ಬಜೆಟ್‌ನಲ್ಲಿ ಏನಿಲ್ಲʼ ಎಂದು ಗೇಲಿ ಮಾಡುತ್ತಾ ಬಿಜೆಪಿ ಶಾಸಕರು ಹೊರನಡೆದಿದ್ದರು. ಈ ರೀತಿ ಬಜೆಟ್ ಮಂಡನೆಯನ್ನೇ ಬಹಿಷ್ಕರಿಸಿರುವುದು ಇತಿಹಾಸದಲ್ಲೇ ಮೊದಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಮೇಲೆ ಹರಿಹಾಯ್ದಿದ್ದರು. ಆದರೆ, ಇದು ಇತಿಹಾಸದಲ್ಲಿ ಮೊದಲೇನಲ್ಲ. ಈ ಹಿಂದೆ ಸಿದ್ದರಾಮಯ್ಯನವರೇ ಬಜೆಟ್ ಬಹಿಷ್ಕಾರದ ಮೂಲಕ ಇತಿಹಾಸ ಬರೆದಿದ್ದರು ಎಂದು ಬಿಜೆಪಿ (Karnataka BJP) ಹೇಳಿದೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಆರ್. ಅಶೋಕ್ (R Ashok) ಅವರು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಒಂದು ಪೋಸ್ಟ್ ಹಾಕಿ, 2021ರ ಬಜೆಟನ್ನು ಆಗ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬಹಿಷ್ಕಾರ ಹಾಕಿದ್ದನ್ನು ನೆನಪಿಸಿಕೊಂಡಿದ್ದಾರೆ.
First Published on Vistara News.

Comments
Post a Comment