Karnataka Budget 2024: ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ ಮಂಡನೆ; ನಾಮನಿರ್ದೇಶನ ಸಂಖ್ಯೆ 3ಕ್ಕೆ ಹೆಚ್ಚಳ
Karnataka Budget 2024: ಸಹಕಾರಿ ಸಂಘಗಳಲ್ಲಿ ಸರ್ಕಾರ ಮಾಡುವ ನಾಮನಿರ್ದೇಶನಗಳ ಸಂಖ್ಯೆಯನ್ನು 3ಕ್ಕೆ ಹೆಚ್ಚಳ ಮಾಡಲು ತಿದ್ದುಪಡಿ ಮಾಡಲಾಗಿದೆ. ಪ್ರಾಥಮಿಕ, ಮಾಧ್ಯಮಿಕ, ಫೆಡರಲ್ ಹಾಗೂ ಅಪೆಕ್ಸ್ ಬ್ಯಾಂಕ್‌ಗಳಲ್ಲಿ ಪ್ರಾತಿನಿಧ್ಯ ಇಲ್ಲದ ವರ್ಗಗಳಿಗೆ ಪ್ರಾತಿನಿಧ್ಯ ಒದಗಿಸುವ ಉದ್ದೇಶವನ್ನು ಈ ವಿಧೇಯಕ ಹೊಂದಿದೆ. ಅಲ್ಲದೆ, ಅನಗತ್ಯ ವೆಚ್ಚ ಕಡಿತಕ್ಕಾಗಿ ಸಹಕಾರ ಚುನಾವಣಾ ಪ್ರಾಧಿಕಾರವನ್ನು ರದ್ದು ಮಾಡಲು ನಿರ್ಧಾರ ಮಾಡಲಾಗಿದೆ.
ಬೆಂಗಳೂರು: ಸುದೀರ್ಘ ಚರ್ಚೆಯ ಬಳಿಕ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ-2024 (Karnataka Co-operative Societies (Amendment) Bill 2024) ಅಂಗೀಕಾರವಾಗಿದೆ. ಸಹಕಾರ ಸಚಿವ ಕೆ.ಎನ್. ರಾಜಣ್ಣ (KN Rajanna) ಮಂಡಿಸಿದ್ದ ಬಿಲ್ ಇದಾಗಿತ್ತು. ಈ ವೇಳೆ ನಿಯಮಗಳನ್ನು ಮಾಡುವಾಗ ಕೆಲವೊಂದು ತಿದ್ದುಪಡಿ ಮಾಡುವಂತೆ ಸದನದಲ್ಲಿ (Karnataka Budget 2024) ಸಲಹೆಗಳು ಕೇಳಿಬಂದವು. ಅದಕ್ಕೆ ಪ್ರತಿಕ್ರಿಯೆ ನೀಡಿದ ರಾಜಣ್ಣ, ಸಲಹೆಗಳೊಂದಿಗೆ ಪರಿಷ್ಕರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ವಿಧೇಯಕವನ್ನು ಅಂಗೀಕಾರ ಮಾಡಲಾಯಿತು.
ಸಹಕಾರಿ ಸಂಘಗಳಲ್ಲಿ ಸರ್ಕಾರ ಮಾಡುವ ನಾಮನಿರ್ದೇಶನಗಳ ಸಂಖ್ಯೆಯನ್ನು 3ಕ್ಕೆ ಹೆಚ್ಚಳ ಮಾಡಲು ತಿದ್ದುಪಡಿ ಮಾಡಲಾಗಿದೆ. ಪ್ರಾಥಮಿಕ, ಮಾಧ್ಯಮಿಕ, ಫೆಡರಲ್ ಹಾಗೂ ಅಪೆಕ್ಸ್ ಬ್ಯಾಂಕ್‌ಗಳಲ್ಲಿ ಪ್ರಾತಿನಿಧ್ಯ ಇಲ್ಲದ ವರ್ಗಗಳಿಗೆ ಪ್ರಾತಿನಿಧ್ಯ ಒದಗಿಸುವ ಉದ್ದೇಶವನ್ನು ಈ ವಿಧೇಯಕ ಹೊಂದಿದೆ. ಅಲ್ಲದೆ, ಅನಗತ್ಯ ವೆಚ್ಚ ಕಡಿತಕ್ಕಾಗಿ ಸಹಕಾರ ಚುನಾವಣಾ ಪ್ರಾಧಿಕಾರವನ್ನು ರದ್ದು ಮಾಡಲು ನಿರ್ಧಾರ ಮಾಡಲಾಗಿದೆ.

Comments
Post a Comment