Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Karnataka Budget 2024: 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲಾಖೆಯ ಬಹುತೇಕ ಬೇಡಿಕೆಗಳಿಗೆ ಸಿಎಂ ಸ್ಪಂದಿಸಿದ್ದಾರೆ ಎಂದು ಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ರಾಜ್ಯ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು, 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲಾಖೆಯ ಬಹುತೇಕ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ ಬಜೆಟ್‌ನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದರು.
First Published on Vistara News.

Comments
Post a Comment