Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಏನು ಸಿಕ್ಕಿದೆ?; ಇಲ್ಲಿದೆ ಮಾಹಿತಿ
Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಯಾವ ಯೋಜನೆ ಸಿಕ್ಕಿದೆ, ಎಷ್ಟು ಅನುದಾನ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3.71 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಅನ್ನು ಶುಕ್ರವಾರ ಮಂಡಿಸಿದ್ದು, ಕೃಷಿ, ಮೂಲಸೌಕರ್ಯ, ಆರೋಗ್ಯ, ಪ್ರವಾಸೋದ್ಯಮ ಸೇರಿ ವಿವಿಧ ವಲಯಗಳಿಗೆ ಅನುದಾನ ಹಂಚಿಕೆ ಮಾಡಲಾಗಿದೆ. ಈ ಬಜೆಟ್‌ನಲ್ಲಿ (Karnataka Budget 2024) ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಯಾವ ಪ್ರಮುಖ ಯೋಜನೆಗಳು ದಕ್ಕಿವೆ ಎಂಬುವುದರ ಕುರಿತ ಜಿಲ್ಲಾವಾರು ವಿವರ ಇಲ್ಲಿದೆ.
ಬೆಂಗಳೂರು
- ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ.
- ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳಿಗೆ 150 ಕೋಟಿ ರೂ.
- ಬೆಂಗಳೂರಿನಲ್ಲಿ ಮುಂದಿನ ಎರಡು ವರ್ಷಗಳಲ್ಲಿ HUB and Spoke ಮಾದರಿಯಲ್ಲಿ 430 ಪ್ರಯೋಗಾಲಯಗಳ ಸ್ಥಾಹನೆಗೆ 20 ಕೋಟಿ ರೂ. ಅನುದಾನ
- ಬೆ೦ಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸಾ ಸೌಲಭ್ಯ.
- ಬೆ೦ಗಳೂರು ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ Knowledge Health Care, Innovation and Research City (KHIR) ಅನ್ನು ಅಭಿವೃದ್ಧಿಗೆ ಕ್ರಮ. 40,000 ಕೋಟಿ ರೂ.ಗಳ ಹೂಡಿಕೆ ಹಾಗೂ 80,000 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ.
- ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ 70 ಎಕರೆ ಪ್ರದೇಶದಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾ ನಗರ (Sports City)ಸ್ಥಾಪನೆ ಹಾಗೂ ನಾಲ್ಕು ಅತ್ಯಾಧುನಿಕ ಕ್ರೀಡ ಸಂಕೀರ್ಣಗಳ ನಿರ್ಮಾಣ.
- ಬೆ೦ಗಳೂರಿನ ಪೊಲೀಸ್ ಸುಲಿವನ್ ಮೈದಾನದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಆಸ್ಟ್ರೋ ಟರ್ಫ್ ಹಾಕಿ ಅಂಕಣ ನಿರ್ಮಾಣ.
- 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆ೦ಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣ ಖರೀದಿಗೆ 21 ಕೋಟಿ ರೂ. ಅನುದಾನ
- ಬೆ೦ಗಳೂರು ಗ್ರಾಮಾ೦ತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ.
- First Published on Vistara News.


Comments
Post a Comment