Karnataka Budget Session 2024: 110 ಹಳ್ಳಿಗಳಿಗೆ ಮೇಯೊಳಗೆ ಕುಡಿಯಲು ಕಾವೇರಿ ನೀರು: ಡಿ.ಕೆ.ಶಿವಕುಮಾರ್

 Karnataka Budget Session 2024: ಬೆಂಗಳೂರಿನ ಕುಡಿಯುವ ನೀರನ್ನು ಮುಂದಿನ ಮೇ ತಿಂಗಳಲ್ಲಿ ಪೂರೈಸಲಾಗುವುದು. ಆದರೆ‌, ಸೀವೇಜ್ ಪ್ಲಾಂಟ್ ಸೇರಿದಂತೆ ಇತರೆ ಕಾಮಗಾರಿಗಳು ಪೂರ್ಣಗೊಳ್ಳಲು 2 ವರ್ಷಗಳು ಬೇಕಾಗಬಹುದು ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.


ಬೆಂಗಳೂರು: ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ಬೆಂಗಳೂರಿನ ಹೊರ ವಲಯಕ್ಕೆ ಕಾವೇರಿ ನೀರನ್ನು ತರುವ ಬಗ್ಗೆ ಚರ್ಚೆಯಾಗಿದೆ. ಬೆಂಗಳೂರು ಇಂದು ಬೃಹದಾಕಾರವಾಗಿ ಬೆಳೆದು ನಿಂತಿದೆ. ಮತ್ತಷ್ಟು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಾ ಮುಂದೆ ಸಾಗುತ್ತಿದೆ. ಹೀಗಾಗಿ ಇಲ್ಲಿ ಕೆಲವು ಕಡೆ ಮೂಲಭೂತ ಸೌಕರ್ಯಗಳು ಆಗಬೇಕಿದೆ. ಬಹುಮುಖ್ಯವಾಗಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಹ ಕಾರ್ಯೋನ್ಮುಖವಾಗಿದೆ. ಬೆಂಗಳೂರು ಹೊರವಲಯದ 110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು ಪೂರೈಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.

ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, “ಕುಡಿಯುವ ನೀರನ್ನು ಮುಂದಿನ ಮೇ ತಿಂಗಳಲ್ಲಿ ಪೂರೈಸಲಾಗುವುದು. ಆದರೆ‌, ಸೀವೇಜ್ ಪ್ಲಾಂಟ್ ಸೇರಿದಂತೆ ಇತರೆ ಕಾಮಗಾರಿಗಳು ಪೂರ್ಣಗೊಳ್ಳಲು 2 ವರ್ಷಗಳು ಬೇಕಾಗಬಹುದು” ಎಂದು ತಿಳಿಸಿದರು.

First Published on Vistara News.


Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!