Karnataka Budget Session 2024: ಅನಧಿಕೃತ ಹುಕ್ಕಾಬಾರ್‌ ತೆರೆದ್ರೆ 3 ವರ್ಷ ಜೈಲು; ಮಸೂದೆ ಪಾಸ್

 Karnataka Budget Session 2024: ಹುಕ್ಕಾ ಬಾರ್ (Hookah Bar) ಅನ್ನು ಅನಧಿಕೃತ ನಡೆಸಿದರೆ ಒಂದರಿಂದ ಮೂರು ವರ್ಷ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ. ಇಂಥದ್ದೊಂದು ವಿಧೇಯಕವನ್ನು ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಗಿದೆ.


ಬೆಂಗಳೂರು: ಧೂಮಪಾನ ಪ್ರಿಯರಿಗೆ ಸರ್ಕಾರ ಶಾಕ್‌ ಕೊಟ್ಟಿದೆ. ಇನ್ನು ಮುಂದೆ ಕಂಡ ಕಂಡಲ್ಲಿ ಸಿಗರೇಟ್‌ ಸೇದುವಂತಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಹೊಗೆ ಬಿಟ್ಟರೆ, ಅಂಥವರ ಜೇಬು ಸುಡುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ (Smoking Cigarette) 1 ಸಾವಿರ ರೂಪಾಯಿ ದಂಡ ಪಾವತಿ ಮಾಡಬೇಕಿದೆ. ಅಲ್ಲದೆ, ಹುಕ್ಕಾ ಬಾರ್ (Hookah Bar) ಅನ್ನು ಅನಧಿಕೃತ ನಡೆಸಿದರೆ ಒಂದರಿಂದ ಮೂರು ವರ್ಷ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ. ಇಂಥದ್ದೊಂದು ವಿಧೇಯಕವನ್ನು ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಗಿದೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ಈ ವಿಧೇಯಕವನ್ನು ಮಂಡಿಸಿದ್ದು, ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು 2024ರ ಸಿಗರೇಟ್ ಸೇವನೆ ಮತ್ತು ಜಾಹೀರಾತು ನಿಷೇಧ.. ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಮತ್ತು ಸರಬರಾಜು ತಿದ್ದುಪಡಿ ವಿಧೇಯಕವನ್ನು ಮಂಡನೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್, ಹುಕ್ಕಾಬಾರ್‌ಗಳನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇದಬಾರದು ಅಂತಿದೆ. ಆದರೆ, ಅನೇಕ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಬಾರ್‌ಗಳನ್ನು ಆರಂಭಿಸಿದ್ದಾರೆ. ಸಿಗರೇಟ್ ಸೇದೋದೇ ತಪ್ಪು ಅಂತ ಹೇಳಿದರೆ, ಮತ್ತೊಂದು ರೂಪದಲ್ಲಿ ತಂದಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಮುಂದಾಗಿದ್ದೇವೆ ಎಂದು ತಿಳಿಸಿದರು.

First Published on Vistara News.


Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!