Karnataka Budget Session 2024: ಬರಪೀಡಿತ ರೈತರಿಗೆ ಕೊಡಲು ಇಲ್ಲದ ಹಣ, ಸಂಪುಟ ದರ್ಜೆ ಭಾಗ್ಯಕ್ಕಿದೆ: ಎಚ್‌ಡಿಕೆ ಕಿಡಿ

Karnataka Budget Session 2024: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ ಎಂದು ಕಿಡಿಕಾರಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಬರಪೀಡಿತ ರೈತರಿಗೆ ಕೊಡಲು ಹಣವಿಲ್ಲ; ಸಂಪುಟ ದರ್ಜೆ ಭಾಗ್ಯಕ್ಕೆ ಹಣವಿದೆ. ಭಾಷಣದಲ್ಲಿ ಕಾಂತರಾಜ್ ವರದಿ ಸದ್ದೇ ಇಲ್ಲವಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕುಟುಕಿದ್ದಾರೆ.


ಬೆಂಗಳೂರು: ರಾಜ್ಯ ಬಜೆಟ್‌ಗೆ (Karnataka Budget Session 2024) ಸಂಬಂಧಿಸಿ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಸರ್ಕಾರವಾಗಿದೆ. ಬರಕ್ಕೆ ತುತ್ತಾದ ರೈತರಿಗೆ ಪರಿಹಾರ ಕೊಡಲು ಇವರಲ್ಲಿ ಹಣವಿಲ್ಲ. ಆದರೆ, ಸಂಪುಟ ದರ್ಜೆ ಭಾಗ್ಯಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದಾರೆ. ಇದನ್ನು ಏನೆಂದು ಕರೆಯಬೇಕು? ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಕಿಡಿಕಾರಿದರು.

ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಲಾದ ರಾಜ್ಯಪಾಲರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಎಚ್‌.ಡಿ. ಕುಮಾರಸ್ವಾಮಿ, ಕ್ಯಾಬಿನೆಟ್ ದರ್ಜೆ ಅದಕ್ಕೊಂದು ಲೆಕ್ಕ ಬೇಡವೇ? ಉಪ ಮುಖ್ಯಮಂತ್ರಿ ಅವರ ಆರೋಗ್ಯ ತಪಾಸಣೆ ಮಾಡುವ ವೈದ್ಯರಿಗೂ ಕ್ಯಾಬಿನೆಟ್ ದರ್ಜೆ! ಕಲೆಕ್ಷನ್ ಮಾಡಿಕೊಡುವ ಅಸಾಮಿಗೂ ಕ್ಯಾಬಿನೆಟ್ ದರ್ಜೆ!! ಕರ್ನಾಟಕ ಹಣಕಾಸು ಸಂಸ್ಥೆ (KSFC) ಅಧ್ಯಕ್ಷರನ್ನಾಗಿ ಶಾಸಕರನ್ನು ನೇಮಕ ಮಾಡುತ್ತಿರುವುದು ಉಂಟಾ? ಎಂದು ಸರ್ಕಾರವನ್ನು ಪ್ರಶ್ನಿಸಿದರು.

ಅಲ್ಲದೆ, ಒಂದು ಕಡೆ ಬರಗಾಲ, ಕೇಂದ್ರ ಸರ್ಕಾರದಿಂದ ಹಣ ಬರುತ್ತಿಲ್ಲ ಎನ್ನುವ ಸರ್ಕಾರ ಇಲ್ಲಿ ನೋಡಿದರೆ ಗಂಜಿ ಕೇಂದ್ರಗಳನ್ನು ಸೃಷ್ಟಿ ಮಾಡಿ 90 ಮಂದಿಗೆ ಸಂಪುಟ ದರ್ಜೆ ನೀಡಿದೆ. ಅದರಲ್ಲಿ 77 ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ನೀಡಿದ್ದರೆ, ಸಿಎಂ ಕಚೇರಿಯಲ್ಲಿ 9 ಜನರಿಗೆ ಸಂಪುಟ ಭಾಗ್ಯ ಕರುಣಿಸಲಾಗಿದೆ. ರಾಜ್ಯದ ಆಡಳಿತಾತ್ಮಕ ಇತಿಹಾಸದಲ್ಲಿಯೂ ಇಷ್ಟು ಬೇಕಾಬಿಟ್ಟಿಯಾಗಿ ಅಧಿಕಾರ ಹಂಚಿಕೆ ಮಾಡಿ ಖಜಾನೆಗೆ ನಷ್ಟ ಉಂಟು ಮಾಡಲಾಗಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ದೂರಿದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!