Karnataka Budget Session 2024: ಬಿಜೆಪಿಯವರ ತಲೆಯಲ್ಲಿ ಏನೂ ಇಲ್ಲ; ಬಡವರ ಕೊಳ್ಳುವ ಶಕ್ತಿ ಹೆಚ್ಚಿಸುವ ಬಜೆಟ್ ಎಂದ ಸಿದ್ದರಾಮಯ್ಯ
Karnataka Budget Session 2024: ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸುವಾಗ ವಾಕ್ ಔಟ್ ಮಾಡಿದ ನಿದರ್ಶನ ಇಲ್ಲ. ಬಜೆಟ್ ಓದಲು ಪ್ರಾರಂಭ ಮಾಡಿದ ಕೂಡಲೇ ಸುನೀಲ್ ಕುಮಾರ್ ಅವರು ಏನಿಲ್ಲ ಏನಿಲ್ಲ ಎಂದು ಘೋಷಣೆ ಕೂಗುತ್ತಿದ್ದರು. ಬಿಜೆಪಿಗೆ ಸಂಸದೀಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಂಗಳೂರು: ರಾಜ್ಯದ ಬಡವರು, ಮಹಿಳೆಯರು, ಯುವಕರು, ಪರಿಶಿಷ್ಟ ಜಾತಿ, ವರ್ಗದವರು, ಅಲ್ಪಸಂಖ್ಯಾತರಿಗೆ ಕೊಂಡುಕೊಳ್ಳುವ ಶಕ್ತಿ ಹೆಚ್ಚು ಮಾಡುವ ಪ್ರಯತ್ನ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ ಪ್ರಯತ್ನವೂ ಬಜೆಟ್‌ನಲ್ಲಿ (Karnataka Budget Session 2024) ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.
ಅವರು ಶುಕ್ರವಾರ 2024-25ನೇ ಸಾಲಿನ ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ನಿರುದ್ಯೋಗ, ಹಣದುಬ್ಬರದ ಸಮಸ್ಯೆಗಳಿಂದ ಬಡವರು ಜೀವನ ಸಾಗಿಸುವುದು ಕಷ್ಟವಾಗಿದೆ. ಬಡವರ ಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡಲು ಗ್ಯಾರಂಟಿ ಯೋಜನೆಗಳನ್ನು ರೂಪಿಸಲಾಗಿದೆ. ಈ ಆರ್ಥಿಕ ವರ್ಷದಲ್ಲಿ ನಾವು ಅಧಿಕಾರಕ್ಕೆ ಬಂದು 9 ತಿಂಗಳಾಗುವ ಮೊದಲೇ ನಾವು ಜನತೆಗೆ ಕೊಟ್ಟಿದ್ದ ಭರವಸೆಗಳನ್ನು ಈಡೇರಿಸಲಾಗಿದೆ. ಇದರೊಂದಿಗೆ ಕೃಷಿ, ನೀರಾವರಿ, ಲೋಕೋಪಯೋಗಿ, ಇಂಧನ, ಗ್ರಾಮೀಣಾಭಿವೃದ್ಧಿ, ಬರಗಾಲ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುವ ದೃಷ್ಟಿಯಿಂದ ಹಾಗೂ ಅಭಿವೃದ್ಧಿಗೆ ಹಣ ಕೊಡುವ ಕೆಲಸವನ್ನೂ ಮಾಡಲಾಗಿದೆ ಎಂದು ಅಭಿಪ್ರಾಯಪಟ್ಟರು.

Comments
Post a Comment