Karnataka Budget Session 2024: ಕೇಂದ್ರದಿಂದ ಅನ್ಯಾಯ ಆಗಿದೆಯೇ? ಬಹಿರಂಗ ಚರ್ಚೆಗೆ ಬನ್ನಿ: ಸಿಎಂಗೆ ಎಚ್‌ಡಿಕೆ ಸವಾಲು

 Karnataka Budget Session 2024: ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ ಎಂದಾದರೆ ಬಹಿರಂಗ ಚರ್ಚೆ ಮಾಡೋಣ. ಅಲ್ಲಿಗೆ ಆರ್ಥಿಕ ತಜ್ಞರು, ಮಾಧ್ಯಮಗಳು, ಸಾರ್ವಜನಿಕರು ಬರಲಿ. ಎಲ್ಲರ ಮುಂದೆ ಮುಂದೆ ಚರ್ಚೆ ನಡೆಸೋಣ. ಅನ್ಯಾಯ ಎಂದಾದರೆ ರಾಜ್ಯಸಭೆಯಲ್ಲಿ ಎಚ್.ಡಿ. ದೇವೇಗೌಡ ಅವರು ಮಾತನಾಡುತ್ತಿದ್ದಾಗ ನಿಮ್ಮ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯಾಕೆ ಸುಮ್ಮನಿದ್ದರು? ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.


ಬೆಂಗಳೂರು: ತೆರಿಗೆ, ಅನುದಾನ ತಾರತಮ್ಯದ ಬಗ್ಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ನಿರಂತರ ಆರೋಪ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಚರ್ಚೆಗೆ ಬರುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ನೇರ ಸವಾಲು ಹಾಕಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಎಚ್.ಡಿ. ಕುಮಾರಸ್ವಾಮಿ, ರಾಷ್ಟ್ರದ ಹಿರಿಯ, ನುರಿತ ಆರ್ಥಿಕ ತಜ್ಞರನ್ನು, ಮಾಧ್ಯಮಗಳನ್ನು ಕರೆಸಿ ಎಲ್ಲರ ಎದುರು ಬಹಿರಂಗ ಚರ್ಚೆ ಮಾಡೋಣ ಬನ್ನಿ. ಕೇಂದ್ರದಿಂದ ಅನ್ಯಾಯ ಆಗುತ್ತಿದೆ ಎಂದು ನೀವು ನಿರೂಪಿಸಿದರೆ ನಿಮ್ಮ ಜತೆ ನಾವೂ ದನಿ ಎತ್ತುತ್ತೇವೆ. ನಿಮ್ಮಲ್ಲಿರುವ ಮಾಹಿತಿಯನ್ನು ನಾಡಿನ ಮುಂದೆ ಇಡಿ. ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಸವಾಲು ಹಾಕಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಾವೇಷದಿಂದ ಸದನದ ಒಳಗೆ ಭಾಷಣ ಮಾಡುತ್ತಿದ್ದಾರೆ. ಕನ್ನಡಿಗರಿಗೆ ಅನ್ಯಾಯ ಆಯಿತು ಎನ್ನುತ್ತಾರೆ. ಕೇಂದ್ರ ಸರ್ಕಾರದಿಂದ ಹಣ ಬರಲಿಲ್ಲ, ಬರಪೀಡಿತ ರೈತರಿಗೆ ಪರಿಹಾರ ಕೊಡಿ ಎಂದರೆ 2000 ರೂ. ಕೊಡುತ್ತಾರೆ. ಈ 2000 ರೂಪಾಯಿಯಲ್ಲಿ 25% ರಾಜ್ಯದ್ದು, ಉಳಿದ 75% ಕೇಂದ್ರದ್ದು. 2624 ಕೋಟಿ ರೂ. ಎಸ್‌ಡಿಆರ್‌ಎಫ್‌ನಲ್ಲಿ ಬಿಡುಗಡೆ ಮಾಡಿದ್ದೇವೆ ಎಂದು ಹೇಳುತ್ತಾರಲ್ಲಾ, ಈ ಹಣದಲ್ಲಿ 75% ಮೊತ್ತವನ್ನು ಕೇಂದ್ರ ಸರ್ಕಾರವೇ ನೀಡಿದೆ. ನಾವು ಕೊಟ್ಟೆವು ಎಂದು ಇವರು ಹೇಳಿದ್ದೇ ಹೇಳಿದ್ದು. ನಾನು ಹೇಳೋದೇ ಸತ್ಯ, ನಾನು ಹೇಳೋದೇ ಸತ್ಯ ಎಂದು ಹೇಳ್ತಾನೇ ಇದ್ದಾರೆ. ನೂರು ಬಾರಿ ಸುಳ್ಳು ಹೇಳಿ ಅದನ್ನೇ ಸತ್ಯ ಮಾಡು ಎಂದು ನಮ್ಮ ಹಿರಿಯರು ಗಾದೆ ಮಾತು ಹೇಳಿದ್ದಾರೆ. ಅದನ್ನು ನಮ್ಮ ಮುಖ್ಯಮಂತ್ರಿಗಳು ಅಚ್ಚುಕಟ್ಟಾಗಿ ನಿರೂಪಣೆ ಮಾಡುತ್ತಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!