Karnataka Budget Session 2024 : ಸರ್ಕಾರದಿಂದ ರೈತರಿಗೆ ಮೋಸ; ಟಿ. ಎ. ಶರವಣ ಆರೋಪ

 Karnataka Budget Session 2024 : ಸರ್ಕಾರ ಕೇವಲ 2 ಸಾವಿರ ರೂಪಾಯಿ ಪರಿಹಾರ ನೀಡುವ ಮೂಲಕ ರೈತರಿಗೆ ಮೋಸ ಮಾಡುತ್ತಿದೆ ಎಂದು ಶರವಣ ಅವರು ಆರೋಪಿಸಿದ್ದಾರೆ.


ಬೆಂಗಳೂರು: ರೈತರಿಗೆ ಬೆಳೆ ನಷ್ಟ ಪರಿಹಾರ ನೀಡುವಲ್ಲಿ ಕಾಂಗ್ರೆಸ್​ ಸರ್ಕಾರ ರೈತರಿಗೆ ಮೋಸ ಮಾಡುತ್ತಿದೆ ಎಂದು ವಿಧಾನ ಪರಿಷತ್​ ಸದಸ್ಯ ಟಿ. ಎ. ಶರವಣ ಆರೋಪಿಸಿದ್ದಾರೆ. ವಿಧಾನಪರಿಷತ್​ ಕಲಾಪದಲ್ಲಿ (Karnataka Budget Session 2024) ಮಾತನಾಡಿದ ಅವರು, ಬೆಳೆ ನಷ್ಟವಾದ ರೈತರಿಗೆ ಸೂಕ್ತ ಪರಿಹಾರ ಧನ ನೀಡದಿರುವ ಕುರಿತಂತೆ ಗಣಿ ಮತ್ತು ಭೂ ವಿಜ್ಞಾನ ತೋಟಗಾರಿಕೆ ಸಚಿವರ ಕ್ರಮವನ್ನು ಪ್ರಶ್ನಿಸಿದರು.

ಸರಕಾರ ಕೊಟ್ಟಿರುವ ಉತ್ತರದಲ್ಲಿ ಒಂದೊಂದು ಎಕರೆಗೆ ಒಂದೊಂದು ದರ ನಿಗದಿ ಮಾಡಲಾಗಿದೆ. 5, 11, 208 ಎಕರೆ ಪ್ರದೇಶದ ಇಡೀ ತೋಟಗಾರಿಕೆ ಬೆಳೆ ನಾಶ ಆಗಿದೆ. ಆದರೆ ಸರ್ಕಾರ ಸೂಕ್ತ ಪರಿಹಾರ ನೀಡುತ್ತಿಲ್ಲ ಎಂದು ಆಕ್ಷೇಪಿಸಿದ್ದಾರೆ. ಎನ್.ಡಿ.ಆರ್.ಆಫ್ ನಿಗದಿ ಮಾಡಿರುವ ರೀತಿಯಲ್ಲಿ ಮಳೆಯಾಶ್ರಿತ ತೋಟಗಾರಿಕೆ ಬೆಳೆಗೆ 8,500 ರೂಪಾಯಿ, ನೀರಾವರಿ ಬೆಳೆಗೆ 17 ಸಾವಿರ, ಬಹುವಾರ್ಷಿಕ ಬೆಳೆಗೆ 22500 ರೂಪಾಯಿ ಪರಿಹಾರ ನೀಡಬೇಕಾಗಿದೆ. ಆದರೆ ಸರ್ಕಾರ ರೈತರಿಗೆ ಭಿಕ್ಷೆ ಎಂಬಂತೆ ಕೇವಲ ಒಬ್ಬೊಬ್ಬರಿಗೆ 2 ಸಾವಿರ ರೂಪಾಯಿ ನೀಡಿದೆ. ಈ ಮೂಲಕ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಭಾಗ್ಯಗಳನ್ನು ನೀಡುವ ಮೂಲಕ ಸರ್ಕಾರದ ಬೊಕ್ಕಸದ ಹಣವನ್ನು ಖಾಲಿ ಮಾಡಲಾಗಿದೆ. ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಟಿ. ಎ. ಶರವಣ ಅವರು ಪ್ರಶ್ನಿಸಿದ್ದಾರೆ.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!