Karnataka Budget Session 2024: ಸದನದಲ್ಲಿ ರಾಮನಗರ ಗದ್ದಲ; ಪಿಎಸ್‌ಐ ಸಸ್ಪೆಂಡ್‌ಗೆ ಬಿಜೆಪಿ – ಜೆಡಿಎಸ್‌ ಪಟ್ಟು!

 Karnataka Budget Session 2024: ರಾಮನಗರ ಗಲಾಟೆಗೆ ಸಂಬಂಧಪಟ್ಟಂತೆ ಲಾಯರ್‌ಗಳ ಚೇಂಬರ್‌ಗೆ ಕೆಲವರು ನುಗ್ಗಿ ಗಲಾಟೆ ಮಾಡಿದ್ದಾರೆ. ಈ ಬಗ್ಗೆ ದೂರು ದಾಖಲು ಮಾಡದ ಪೊಲೀಸರು, ವಕೀಲರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದ್ದಾರೆ. ಹೀಗಾಗಿ ಸರಿಯಾಗಿ ಕಾರ್ಯನಿರ್ವಹಣೆ ಮಾಡದ ಪಿಎಸ್‌ಐಯನ್ನು ವಜಾ ಮಾಡಿ ಎಂದು ಆಗ್ರಹಿಸಿದರು. ಇದಕ್ಕೆ ಗೃಹ ಸಚಿವರಿಂದ ಸಮರ್ಪಕ ಉತ್ತರ ಸಿಕ್ಕಿಲ್ಲ ಎಂದು ಆಕ್ರೋಶಗೊಂಡು ಸದನದ ಬಾವಿಗಿಳಿದು ಪ್ರತಿಭಟನೆಯನ್ನು ನಡೆಸಲಾಗಿದೆ.


ಬೆಂಗಳೂರು: ವಿಧಾನ ಮಂಡಲ ಅಧಿವೇಶನದ (Karnataka Budget Session 2024) ಶೂನ್ಯ ವೇಳೆಯಲ್ಲಿ ರಾಮನಗರ ವಿಚಾರ ಪ್ರಸ್ತಾಪವಾಗಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್ (R Ashok) ಅವರು ಈ ವಿಷಯವನ್ನು ಪ್ರಸ್ತಾಪ ಮಾಡಿ, ರಾಮನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಸೂಕ್ಷ್ಮ ಪ್ರದೇಶವಾಗಿದೆ. ಈ ವಿಚಾರವಾಗಿ ಚಾಂದ್‌ ಪಾಶ ಎಂಬ ವ್ಯಕ್ತಿ ಸೋಷಿಯಲ್‌ ಮೀಡಿಯಾದಲ್ಲಿ ಜಡ್ಜ್‌ ಬಗ್ಗೆಯೇ ಅವಹೇಳನಕಾರಿಯಾಗಿ ಬರೆದಿದ್ದರಿಂದ ದೂರು ಕೊಡಲಾಗಿತ್ತು. ಆದರೆ, ಲಾಯರ್‌ಗಳ ಚೇಂಬರ್‌ಗೆ ಕೆಲವರು ನುಗ್ಗಿ ಗಲಾಟೆ ಮಾಡಿದ್ದಾರೆ. ಈ ಬಗ್ಗೆ ದೂರು ದಾಖಲು ಮಾಡದ ಪೊಲೀಸರು, ವಕೀಲರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದ್ದಾರೆ. ಹೀಗಾಗಿ ಸರಿಯಾಗಿ ಕಾರ್ಯನಿರ್ವಹಣೆ ಮಾಡದ ಪಿಎಸ್‌ಐಯನ್ನು ವಜಾ ಮಾಡಿ ಎಂದು ಆಗ್ರಹಿಸಿದರು. ಇದಕ್ಕೆ ಗೃಹ ಸಚಿವರಿಂದ ಸಮರ್ಪಕ ಉತ್ತರ ಸಿಕ್ಕಿಲ್ಲ ಎಂದು ಆಕ್ರೋಶಗೊಂಡು ಸದನದ ಬಾವಿಗಿಳಿದು ಪ್ರತಿಭಟನೆಯನ್ನು ನಡೆಸಲಾಗಿದೆ.

ಸದನದ ಶೂನ್ಯ ವೇಳೆಯಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಿದ ಆರ್.‌ ಅಶೋಕ್‌, ಚಾಂದ್ ಪಾಶ ಎಂಬ ವ್ಯಕ್ತಿ ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ಕೊಟ್ಟಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜಡ್ಜ್ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದಾರೆ. ಅವರ ವಿರುದ್ಧ ಠಾಣೆಗೆ ಹಾಗೂ ಬಾರ್ ಅಸೋಸಿಯೇಷನ್‌ಗೆ ದೂರು ಕೊಡಲಾಗಿತ್ತು. ಆದರೆ, ಕೆಲವರು ಲಾಯರ್‌ಗಳ ಚೇಂಬರ್‌ಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಅವರ ವಿರುದ್ಧ ವಕೀಲರು ದೂರು ಕೊಟ್ಟರೂ ಪೊಲೀಸರು ದೂರು ದಾಖಲು ಮಾಡಿಲ್ಲ. ಆದರೆ, ಚಾಂದ್ ಪಾಶಾ ಕಡೆಯಿಂದ ದೂರನ್ನು ಪಡೆದುಕೊಂಡು ವಕೀಲರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗುತ್ತದೆ. ಹೀಗಾಗಿ ವಕೀಲರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!