Karnataka Budget Session 2024: ಗೋಪಾಲಯ್ಯಗೆ ʼಕೊಲೆ ಬೆದರಿಕೆʼ ಮೇಲ್ಮನೆ ವ್ಯಾಪ್ತಿಗೆ ಬರಲ್ಲ!
Karnataka Budget Session 2024: ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ ಕೇಸ್ ಚಾರವನ್ನು ಪರಿಷತ್‌ನಲ್ಲಿ ಪ್ರಸ್ತಾಪ ಮಾಡಲು ಬರುವುದಿಲ್ಲ. ಮೇಲ್ಮನೆಯಲ್ಲಿ ಇದರ ಬಗ್ಗೆ ಹೇಳಬೇಡಿ ಎಂದು ಹೇಳಿದರು. ಆಗ ಮಧ್ಯ ಪ್ರವೇಶ ಮಾಡಿದ ಸಭಾಪತಿ, ಚುನಾಯಿತ ಸದಸ್ಯರಿಗೆ ಕೊಲೆ ಬೆದರಿಕೆ ಬಂದಾಗ ಇಲ್ಲಿ ಪ್ರಸ್ತಾಪ ಮಾಡಿದರೆ ಯಾವುದೇ ತಪ್ಪು ಆಗುವುದಿಲ್ಲ. ಇಂಥ ಪ್ರಕರಣಗಳಲ್ಲಿ ಕೆಳ ಮನೆ, ಮೇಲ್ಮನೆ ಅಂತ ಬರುವುದಿಲ್ಲ ಎಂದು ಹೇಳಿದರು.
ಬೆಂಗಳೂರು: ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ಚುನಾಯಿತ ಪ್ರತಿನಿಧಿ ಮೇಲೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣಗಳು ಚರ್ಚೆಗೆ ಬಂದಿದೆ. ಈ ಸಂಬಂಧ ವಿಧಾನ ಪರಿಷತ್‌ನಲ್ಲಿ (Legislative Council) ಚರ್ಚೆಯನ್ನು ನಡೆಸಲಾಗಿದ್ದು, ಶಾಸಕ ಕೆ. ಗೋಪಾಲಯ್ಯ (K Gopalaiah) ಅವರಿಗೆ ಹಾಕಲಾಗಿರುವ ಕೊಲೆ ಬೆದರಿಕೆ ವಿಷಯ ಮೇಲ್ಮನೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಆಡಳಿತ ಪಕ್ಷದ ಸದಸ್ಯರು ಹೇಳಿದ್ದು, ಕೆಲ ಕಾಲ ವಾಕ್ಸಮರಕ್ಕೆ ಕಾರಣವಾಯಿತು.
ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ ಬಂದಿರುವ ವಿಚಾರವನ್ನು ಪರಿಷತ್‌ನಲ್ಲಿ ಪ್ರಸ್ತಾಪ ಮಾಡಿದ ಕೋಟಾ ಶ್ರೀನಿವಾಸ್ ಪೂಜಾರಿ, ಪದ್ಮರಾಜ್ ಎಂಬುವವರಿಂದ ಕೊಲೆ ಬೆದರಿಕೆ ಬಂದಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಭಾನಾಯಕ ಬೋಸರಾಜು, ಈ ವಿಚಾರವನ್ನು ಪರಿಷತ್‌ನಲ್ಲಿ ಪ್ರಸ್ತಾಪ ಮಾಡಲು ಬರುವುದಿಲ್ಲ. ಮೇಲ್ಮನೆಯಲ್ಲಿ ಇದರ ಬಗ್ಗೆ ಹೇಳಬೇಡಿ ಎಂದು ಹೇಳಿದರು. ಆಗ ಮಧ್ಯ ಪ್ರವೇಶ ಮಾಡಿದ ಸಭಾಪತಿ, ಚುನಾಯಿತ ಸದಸ್ಯರಿಗೆ ಕೊಲೆ ಬೆದರಿಕೆ ಬಂದಾಗ ಇಲ್ಲಿ ಪ್ರಸ್ತಾಪ ಮಾಡಿದರೆ ಯಾವುದೇ ತಪ್ಪು ಆಗುವುದಿಲ್ಲ. ಇಂಥ ಪ್ರಕರಣಗಳಲ್ಲಿ ಕೆಳ ಮನೆ, ಮೇಲ್ಮನೆ ಅಂತ ಬರುವುದಿಲ್ಲ ಎಂದು ಹೇಳಿದರು.
First Published on Vistara News.

Comments
Post a Comment