Karnataka Budget Session 2024: ಕೆಟ್ಟು ನಿಂತ ಕಾಂಗ್ರೆಸ್‌ ಸರ್ಕಾರ; ದಲಿತರ ಹಣ ಬೇರೆಡೆ ಬಳಸಿದ್ದೇಕೆ?: ಆರ್. ಅಶೋಕ್‌

 Karnataka Budget Session 2024: ಕಾಂಗ್ರೆಸ್ ಸರ್ಕಾರದಲ್ಲಿ ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯುತ್ತಿದೆ. ಸಚಿವರು ದಾರಿ ಕಾಣದಂತಾಗಿದ್ದು, ಸರ್ಕಾರ ಕೆಟ್ಟು ದುರಸ್ತಿಯಾಗದೆ ಸ್ಥಗಿತಗೊಂಡಿದೆ. ಹಣವನ್ನು ಸಮಾನವಾಗಿ ಹಂಚಬೇಕೆನ್ನುವುದು ಸರ್ಕಾರದ ಉದ್ದೇಶವಂತೆ. ಆದರೆ‌, ತುಳಿತಕ್ಕೊಳಗಾದ ದಲಿತರಿಗೆ ಮೀಸಲಿಟ್ಟ 11,400 ಕೋಟಿ ರೂಪಾಯಿಯನ್ನು ಬೇರೆ ಕಡೆಗೆ ಬಳಸಿದ್ದಾರೆ. ಇದನ್ನು ಯಾವುದಕ್ಕೆ ಬಳಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಅಶೋಕ್‌ ಆಗ್ರಹಿಸಿದ್ದಾರೆ.


ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಹಣವಿಲ್ಲದೆ ದಲಿತರ ಹಣವನ್ನು ಬೇರೆ ಯೋಜನೆಗಳಿಗೆ ಬಳಸಲಾಗುತ್ತಿದೆ. ರಾಜ್ಯಪಾಲರ ಭಾಷಣದಲ್ಲಿ ಏನು ಹೇಳಿಸಬೇಕೆಂದು ತಿಳಿಯದೆ ಕೇಂದ್ರ ‌ಸರ್ಕಾರದ ಯೋಜನೆಗಳನ್ನೂ ತಮ್ಮದೇ ಎಂದು ಬಿಂಬಿಸಿಕೊಂಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್‌ (R Ashok) ಕಿಡಿಕಾರಿದರು. ವಿಧಾನಸಭೆಯಲ್ಲಿ (Karnataka Budget Session 2024) ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದಡಿ ಮಾತನಾಡಿದ ಆರ್.‌ ಅಶೋಕ್, ಕಾಂಗ್ರೆಸ್ ಸರ್ಕಾರದಲ್ಲಿ ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯುತ್ತಿದೆ. ಸಚಿವರು ದಾರಿ ಕಾಣದಂತಾಗಿದ್ದು, ಸರ್ಕಾರ ಕೆಟ್ಟು ದುರಸ್ತಿಯಾಗದೆ ಸ್ಥಗಿತಗೊಂಡಿದೆ. ಹಣವನ್ನು ಸಮಾನವಾಗಿ ಹಂಚಬೇಕೆನ್ನುವುದು ಸರ್ಕಾರದ ಉದ್ದೇಶವಂತೆ. ಆದರೆ‌, ತುಳಿತಕ್ಕೊಳಗಾದ ದಲಿತರಿಗೆ ಮೀಸಲಿಟ್ಟ 11,400 ಕೋಟಿ ರೂಪಾಯಿಯನ್ನು ಬೇರೆ ಕಡೆಗೆ ಬಳಸಿದ್ದಾರೆ. ಹಿಂದುಳಿದವರ ಚಾಂಪಿಯನ್‌ ಎಂದು ಹೇಳಿಕೊಂಡು ಈ ರೀತಿ ಮಾಡುತ್ತಿದ್ದಾರೆ. ಇಂತಹ ಘನ ಕಾರ್ಯಕ್ಕೆ ಆ ಹಣ ಬಳಸಿದ್ದೇವೆ ಎಂದು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!