Rajya Sabha Election: ರಾಜ್ಯಸಭೆಗೆ ಸೋನಿಯಾ ಗಾಂಧಿ! ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧೆ?

 Rajya Sabha: ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದ ಮೂಲಕ ರಾಜ್ಯಸಭೆಗೆ ಸ್ಪರ್ಧಿಸಲಿದ್ದಾರೆಂದು ತಿಳಿದು ಬಂದಿದೆ.


ನವದೆಹಲಿ: ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Congress Leader Sonia Gandhi) ಅವರು ರಾಜಸ್ಥಾನದ ಮೂಲಕ ರಾಜ್ಯಸಭೆಗೆ (Rajya Sabha Election) ಸ್ಪರ್ಧಿಸಲಿದ್ದಾರೆ ಮತ್ತು ಮುಂಬರುವ ಲೋಕಸಭೆ ಚುನಾವಣೆಗೆ ಪುತ್ರ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರು ಉತ್ತರ ಪ್ರದೇಶದ ರಾಯ್ ಬರೇಲಿ (Rai Bareilly) ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಮೂಲಗಳು ತಿಳಿಸಿವೆ. ಸೋನಿಯಾ ಗಾಂಧಿ ಅವರು ರಾಯ್ ಬರೇಲಿ ಲೋಕಸಭೆ ಕ್ಷೇತ್ರದ ಹಾಲಿ ಸಂಸದೆಯಾಗಿದ್ದಾರೆ.

ಕೆಲವು ದಿನಗಳ ಹಿಂದೆ ಸೋನಿಯಾ ಗಾಂಧಿ ಅವರು ಕರ್ನಾಟಕದ ಮೂಲಕ ರಾಜ್ಯಸಭೆಗೆ ಸ್ಪರ್ಧಿಸಲಿದ್ದಾರೆಂಬ ಸುದ್ದಿಗಳಿದ್ದವು. ಆದರೆ, ಈಗಿನ ಮೂಲಗಳ ಪ್ರಕಾರ ಅವರು ರಾಜಸ್ಥಾನದ ಮೂಲಕ ರಾಜ್ಯಸಭೆಯನ್ನು ಸ್ಪರ್ಧಿಸಲಿದ್ದಾರೆ. ಮತ್ತೊಂದೆಡೆ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಚುನಾವಣಾ ರಾಜಕಾರಣಕ್ಕೆ ಪ್ರವೇಶ ಪಡೆಯಲು ಮುಂದಾಗಿದ್ದು, ತಮ್ಮ ತಾಯಿ ಪ್ರತಿನಿಧಿಸುತ್ತಿರುವ ರಾಯ ಬರೇಲಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಿಯಾಂಕಾ ಅವರು ಸದ್ಯ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ.

ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆ, ಇತ್ತೀಚೆಗೆ ನಡೆದ ತೆಲಂಗಾಣ ವಿಧಾನ ಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಈ ಎರಡೂ ಚುನಾವಣೆಯನ್ನು ಗೆಲ್ಲಿಸುವಲ್ಲಿ ಅವರು ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಮತ್ತೊಂದೆಡೆ, ಕೇರಳದ ವಯನಾಡ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ರಾಹುಲ್ ಗಾಂಧಿ ಅವರು ಮತ್ತೆ ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದರಿಂದ ಸ್ಪರ್ಧಿಸಲಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಖಚಿತ ಮಾಹಿತಿ ಇಲ್ಲ. ಅಮೇಠಿ ಕ್ಷೇತ್ರದಲ್ಲಿ 2019ರ ಚುನಾವಣೆಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ದ ರಾಹುಲ್ ಗಾಂಧಿ ಸೋಲು ಅನುಭವಿಸಿದ್ದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!