Rajya Sabha Election: ಕೆಆರ್‌ಪಿಪಿ ಏಜೆಂಟ್‌ ಆಗಿ ಡಿಕೆಶಿ ಆಪ್ತ ಯೋಗೇಂದ್ರ ನೇಮಕ; ರಾಜ್ಯಸಭೆಯಲ್ಲಿ ಕಾಂಗ್ರೆಸ್‌ಗೆ ರೆಡ್ಡಿ ಬೆಂಬಲ

 Rajya Sabha Election: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಜಿ. ಜನಾರ್ದನ ರೆಡ್ಡಿ ಅವರು ಯೋಗೇಂದ್ರ ವಿಕ್ರಂ ಅವರನ್ನು ತಮ್ಮ ಪಕ್ಷದ ಪರವಾಗಿ ಚುನಾವಣೆ ಏಜೆಂಟ್ ಆಗಿ ನೇಮಕ ಮಾಡಿದ್ದಾರೆ.


ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಗೆ ಮಂಗಳವಾರ (ಫೆ. 27) ನಡೆಯಲಿರುವ ಚುನಾವಣೆ (Rajya Sabha Election) ಹಿನ್ನೆಲೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಜಿ. ಜನಾರ್ದನ ರೆಡ್ಡಿ (Janardhana Reddy) ಅವರು ಯೋಗೇಂದ್ರ ವಿಕ್ರಂ (Yogendra Vikram) ಅವರನ್ನು ಚುನಾವಣೆ ಏಜೆಂಟ್ ಆಗಿ ನೇಮಕ ಮಾಡಿದ್ದಾರೆ. ಇವರು ಡಿಸಿಎಂ ಡಿ.ಕೆ. ಶಿವಕುಮಾರ್‌ ಆಪ್ತರಾಗಿದ್ದಾರೆ. ಹೀಗಾಗಿ ರೆಡ್ಡಿ ಮತ ಕಾಂಗ್ರೆಸ್‌ಗೆ ಖಚಿತ ಎಂದೇ ಹೇಳಲಾಗುತ್ತಿದೆ.

ಈ ಬಗ್ಗೆ ವಿಕ್ರಂ ಅವರು ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ಸೋಮವಾರ ಪತ್ರ ಸಲ್ಲಿಸಿದರು. ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿದ್ದರು.

ರಾಜ್ಯಸಭಾ ಚುನಾವಣೆ (Rajya Sabha Election) ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ತಂತ್ರಗಾರಿಕೆ ಜೋರಾಗಿದೆ. ಬಹುಮತ ಇರುವ ಕಾಂಗ್ರೆಸ್‌ ಶತಾಯಗತಾಯ ಗೆಲ್ಲಲೇಬೇಕು ಎಂದು ಪಣ ತೊಟ್ಟಿದೆ. ಈ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿಯನ್ನು ತಮ್ಮತ್ತ ಸೆಳೆದುಕೊಂಡಿದ್ದು, ಪಕ್ಷದ ಅಭ್ಯರ್ಥಿ ಪರ ಮತ ಹಾಕಿಸಲು ಮುಂದಾಗಿದೆ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರನ್ನು ರೆಡ್ಡಿ ಅವರು ಸಿಎಂ ನಿವಾಸ ಕಾವೇರಿಯಲ್ಲಿ ಸೋಮವಾರ ಭೇಟಿ ಮಾಡಿರುವುದು ಇದನ್ನು ಪುಷ್ಟೀಕರಿಸುತ್ತದೆ. ಅಲ್ಲದೆ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸಂಬಂಧಿಸಿ ರಾಜ್ಯಸಭಾ ಚುನಾವಣೆ ಏಜೆಂಟ್‌ ಆಗಿ ಯೋಗೇಂದ್ರ ವಿಕ್ರಂ ಅವರನ್ನು ನೇಮಕ ಮಾಡಲಾಗಿದೆ. ಇವರು ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಪತ್ರ ಕೊಡುವ ವೇಳೆ ಡಿ.ಕೆ. ಶಿವಕುಮಾರ್‌ ಹಾಗೂ ಶಿವರಾಜ್‌ ತಂಗಡಗಿ ಇರುವುದು ಈ ಅನುಮಾನವನ್ನು ಮತ್ತಷ್ಟು ದೃಢಪಡಿಸಿದೆ.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!