Rajyasabha Election : ದ್ರೋಹ ಎಸಗಿದ ಸೋಮಶೇಖರ್ ವಿರುದ್ಧ ಸಿಡಿದ ಬಿಜೆಪಿ; ಪ್ರತಿಕೃತಿಗೆ ಬೆಂಕಿ, ಚಪ್ಪಲಿ ಏಟು
Rajyasabha Election : ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಎಸ್.ಟಿ. ಸೋಮಶೇಖರ್ ಅವರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಆಕ್ರೋಶ ಭುಗಿಲೆದ್ದಿದೆ. ಹಲವು ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿವೆ.
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ (Rajyasabha Election) ಬಿಜೆಪಿಯ ಅಧಿಕೃತ ಅಭ್ಯರ್ಥಿಗೆ ಮತ ಹಾಕದೆ ಕಾಂಗ್ರೆಸ್ ಅಭ್ಯರ್ಥಿಗೆ ಅಡ್ಡ ಮತದಾನ ಮಾಡಿದ ಮಾಜಿ ಸಚಿವ, ಯಶವಂತಪುರದ ಶಾಸಕ ಎಸ್.ಟಿ ಸೋಮಶೇಖರ್ (ST Somashekhar) ವಿರುದ್ಧ ಬಿಜೆಪಿ ಕಾರ್ಯಕರ್ತರ (BJP Activists protest) ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ಕಾರ್ಯಕರ್ತರು ಹಲವು ಕಡೆ ಅವರ ಪ್ರತಿಕೃತಿಗೆ ಚಪ್ಪಲಿ ಏಟು ನೀಡಿದ್ದಲ್ಲದೆ, ಬೆಂಕಿ ಹಚ್ಚಿ ತಮ್ಮ ಸಿಟ್ಟನ್ನು ಪ್ರದರ್ಶಿಸಿದ್ದಾರೆ.
ಪ್ರಮುಖವಾಗಿ ಬೆಂಗಳೂರಿನ ಯಶವಂತಪುರದಲ್ಲಿ ಬಿಜೆಪಿ ಕಚೇರಿಯ ಎದುರು, ಅವರ ಮನೆಯ ಹತ್ತಿರ ಮತ್ತು ಜೆಡಿಎಸ್ ಕಚೇರಿ ಜೆಪಿ ಭವನದ ಮುಂಭಾಗ ಪ್ರತಿಭಟನೆ ನಡೆದಿದೆ. ಜೆಡಿಎಸ್ ಕೂಡಾ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿದೆ.
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗಾಗಿ ನಡೆದ ಚುನಾವಣೆಗೆ ಕಾಂಗ್ರೆಸ್ ಮೂವರು, ಬಿಜೆಪಿ ಒಬ್ಬರು ಮತ್ತು ಎನ್‌ಡಿಎ ಕಡೆಯಿಂದ ಒಬ್ಬ ಅಭ್ಯರ್ಥಿಯನ್ನು ನಿಲ್ಲಿಸಲಾಗಿತ್ತು. ಬಿಜೆಪಿ ಶಾಸಕರಾಗಿರುವ ಎಸ್.ಟಿ ಸೋಮಶೇಖರ್ ಅವರು ಅಧಿಕೃತ ಬಿಜೆಪಿ ಅಭ್ಯರ್ಥಿ ನಾರಾಯಣ ಸಾ ಭಾಂಡಗೆ ಅವರಿಗೆ ಮತ ಹಾಕಲು ವಿಪ್ ಪಡೆದಿದ್ದರು. ಆದರೆ, ಅದನ್ನು ಧಿಕ್ಕರಿಸಿ ಕಾಂಗ್ರೆಸ್‌ನ ಮೂರನೇ ಅಭ್ಯರ್ಥಿ ಜಿ.ಸಿ. ಚಂದ್ರಶೇಖರ್ ಅವರಿಗೆ ಮತ ಹಾಕಿದ್ದರು. ಇನ್ನೊಬ್ಬ ಬಿಜೆಪಿ ಬಂಡುಕೋರ ಶಿವರಾಮ ಹೆಬ್ಬಾರ್ ಅವರು ಮತದಾನದಿಂದಲೇ ದೂರ ಉಳಿದಿದ್ದರು.
First Published on Vistara News.

Comments
Post a Comment