Rajyasabha Election : ಸೋಮಶೇಖರ್‌ ಮಾಡಿದ್ದು ರಾಜಕೀಯ ವ್ಯಭಿಚಾರ ಎಂದ ಸಿ.ಟಿ ರವಿ

 Rajyasabha Election : ಪಕ್ಷ-ಪಕ್ಷ ಅನ್ನೋ ನಾವು ಪ್ರಶ್ನೆಗಳಿಗೆ ಒಳಗಾಗ್ತೀವಿ. ಆದರೆ, ರಾಜಕಾರಣದ ವ್ಯಭೀಚಾರ ಮಾಡೋರು ಎಲ್ಲಾ ಕಡೆ ಸಲ್ಲುತ್ತಾರೆ. ರಾಜಕೀಯ ವ್ಯಭಿಚಾರ ಮಾಡೋರು ಎಲ್ಲಾ ಕಡೆ ಹೋಗಿ ಸುಲಭವಾಗಿ ಸೆಟ್ ಆಗ್ತಾರೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ.


ಚಿಕ್ಕಮಗಳೂರು: ರಾಜ್ಯಸಭೆ ಚುನಾವಣೆಯಲ್ಲಿ (Rajyasabha Election) ಯಶವಂತ ಪುರದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ (ST Somashekhar) ಅವರು ಅಡ್ಡ ಮತದಾನ (Cross Voting) ಮಾಡಿದ್ದನ್ನು ರಾಜಕೀಯ ವ್ಯಭಿಚಾರ (Political Adultery) ಎಂದು ಮಾಜಿ ಶಾಸಕ ಸಿ.ಟಿ ರವಿ (CT Ravi) ವ್ಯಾಖ್ಯಾನಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಬಿಜೆಪಿಯ ಹಿರಿಯ ನಾಯಕ ಸಿ.ಟಿ. ರವಿ ಅವರು ಅಡ್ಡ ಮತದಾನ ರಾಜಕೀಯ ವ್ಯಭಿಚಾರಕ್ಕೆ ಸಮ ಎಂದು ಹೇಳಿದರು.

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗಾಗಿ ನಡೆದ ಚುನಾವಣೆಯಲ್ಲಿ ಎಸ್.ಟಿ. ಸೋಮಶೇಖರ್‌ ಅವರು ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಚಲಾಯಿಸುವ ಬದಲು ಕಾಂಗ್ರೆಸ್‌ನ ಮೂರನೇ ಅಭ್ಯರ್ಥಿಗೆ ಮತ ಹಾಕುವ ಮೂಲಕ ವಿಪ್‌ ಉಲ್ಲಂಘನೆ ಮಾಡಿದ್ದರು. ಅದಕ್ಕಿಂತ ಮೊದಲು ಮಾತನಾಡಿದ್ದ ಅವರು, ನನ್ನ ಕ್ಷೇತ್ರಕ್ಕೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ, ವಿಪ್‌, ಶಿಸ್ತು ಕ್ರಮ ಯಾವುದೂ ಲೆಕ್ಕಕ್ಕಿಲ್ಲ ಎಂದು ಹೇಳಿದ್ದರು.

ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿ.ಟಿ. ರವಿ ಅವರು, ವ್ಯಕ್ತಿ ಸಂಬಂಧಕ್ಕೋಸ್ಕರ ರಾಜೀ ರಾಜಕಾರಣ ಒಳ್ಳೆಯದಲ್ಲ. ಅವಕಾಶವಾದಿಗಳಿಗೆ ಸಪೋರ್ಟ್ ಮಾಡೋದು ಅನೈತಿಕ ರಾಜಕಾರಣಕ್ಕೆ ವೇದಿಕೆ ಸೃಷ್ಟಿಸಿದಂತೆ ಎಂದು ಹೇಳಿದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!