Supreme Court: ಚಂಡೀಗಢ ಮೇಯರ್ ಚುನಾವಣಾಧಿಕಾರಿಗೆ ಸುಪ್ರೀಂ ಗುದ್ದು; ವಿಚಾರಣೆ ಎದುರಿಸಿ ಎಂದ ಕೋರ್ಟ್

 Supreme Court: ಚಂಡೀಗಢ ಮೇಯರ್ ಚುನಾವಣಾಧಿಕಾರಿಯ ಪಕ್ಷಪಾತಿಯಾಗಿ ವರ್ತಿಸಿದ್ದಾರೆಂದು ಆಪ್ ಮತ್ತು ಕಾಂಗ್ರೆಸ್ ಆರೋಪಿಸಿದ್ದವು.


ನವದೆಹಲಿ: ಚಂಡೀಗಢ ಮೇಯರ್ ಚುನಾವಣೆಯನ್ನು (Chandigarh Mayor Election) ಪಕ್ಷಪಾತಿಯಾಗಿ ನಡೆಸಿದ ಚುನಾವಣಾಧಿಕಾರಿ ಅನಿಲ್ ಮಸಿಹ್ (Presiding Officer Anil Masih) ಅವರನ್ನು ವಿಚಾಣೆಗೊಳಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ(Supreme Court). ಚುನಾವಣೆಯ ಸಂದರ್ಭದಲ್ಲಿ ಮತ ಪತ್ರಗಳನ್ನು ವಿರೂಪಗೊಳಿಸಿರುವ ಆರೋಪದ ಕುರಿತು ಸುಪ್ರೀಂ ಕೋರ್ಟ್‌ ವ್ಯಗ್ರವಾಗಿದೆ. ಅಲ್ಲದೇ, ಅಧಿಕಾರಿಯನ್ನು ತೀವ್ರ ವಿಚಾರಣೆಗೊಳಪಡಿಸಬೇಕು ಎಂದು ಹೇಳಿದೆ.

ಮೇಯರ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ನ್ಯಾಯಾಲಯಕ್ಕೆ ಸಲ್ಲಿಕೆಯಾದ ಮನವಿ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕುದುರೆ ವ್ಯಾಪಾರ ನಡೆಯುತ್ತಿರುವುದು ಕೂಡ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದೆ. ಚುನಾವಣೆ ನಡೆದ ಮಾರನೇ ದಿನವೇ ಆಪ್‌ನ ಕೆಲವು ಕೌನ್ಸಿಲರ್‌ಗಳು ಬಿಜೆಪಿಗೆ ಜಿಗಿದಿದ್ದಾರೆ.

ಮತ ಪತ್ರಗಳನ್ನು ಮಂಗಳವಾರ ಪರೀಕ್ಷೆಗೆ ತರುವಂತೆ ನ್ಯಾಯಾಲಯ ತಿಳಿಸಿದ್ದು, ಹೊಸದಾಗಿ ಚುನಾವಣೆ ನಡೆಸುವ ಬದಲು ಹೊಸ ಚುನಾವಣಾಧಿಕಾರಿಯಿಂದ ಮತ ಎಣಿಕೆ ಮಾಡಬೇಕು ಎಂದು ಆರಂಭದಲ್ಲಿ ಪ್ರಸ್ತಾಪಿಸಿದ ನ್ಯಾಯಾಲಯ, ಮತ ಪತ್ರಗಳನ್ನು ಪರಿಶೀಲಿಸಿದ ನಂತರ ಈ ಬಗ್ಗೆ ನಿರ್ಧರಿಸುವುದಾಗಿ ಹೇಳಿದೆ.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!