Basavaraja Bommai : ಕಾಂಗ್ರೆಸ್‌ಗೆ ಅಭ್ಯರ್ಥಿಗಳೇ ಸಿಗ್ತಿಲ್ಲ, ಸಚಿವರೂ ಹೆದರುತ್ತಿದ್ದಾರೆ ಎಂದ ಬೊಮ್ಮಾಯಿ
Basavaraja Bommai : ಲೋಕಸಭಾ ಚುನಾವಣೆಯ ಕಣಕ್ಕಿಳಿಯಲು ಕಾಂಗ್ರೆಸ್‌ಗೆ ಕೆಲವು ಕಡೆ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಸಚಿವರನ್ನು ಕಣಕ್ಕಿಳಿಸಲು ಯತ್ನಿಸಿದರೆ ಅವರೂ ಒಪ್ಪುತ್ತಿಲ್ಲ ಎಂದು ಹೇಳಿದ್ದಾರೆ ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ.
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ (Lok sabha Election 2024) ಸೋಲುವ ಭೀತಿಯಿಂದ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲು ಅಭ್ಯರ್ಥಿಗಳು (No Candidates for Congress) ಸಿಗುತ್ತಿಲ್ಲ. ಸಚಿವರನ್ನು ಸ್ಪರ್ಧೆಗೆ ಒತ್ತಡ ಹೇರಲಾಗುತ್ತಿದ್ದು, ಅವರೂ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದ್ದಾರೆ.
ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಪಡೆದುಕೊಂಡಿರುವ ಬೊಮ್ಮಾಯಿ ಅವರು ಗುರುವಾರ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
First Published On Vistara News.

Comments
Post a Comment