BJP Manifesto: ಪ್ರಣಾಳಿಕೆ ತಯಾರಿಸಲು ಸಮಿತಿ ರಚಿಸಿದ ಬಿಜೆಪಿ; ಯಾರೆಲ್ಲ ಇದ್ದಾರೆ?

 BJP Manifesto: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ಪ್ರಣಾಳಿಕೆ ತಯಾರಿಸುವ ದಿಸೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಪ್ರಣಾಳಿಕೆ ರಚಿಸಲು ಬಿಜೆಪಿಯು ಸಮಿತಿಯೊಂದನ್ನು ರಚಿಸಿದೆ. ಸಮಿತಿ ಶಿಫಾರಸಿನ ಬಳಿಕ ಬಿಜೆಪಿಯು ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ ಎಂದು ತಿಳಿದುಬಂದಿದೆ.


ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಶತಾಯಗತಾಯ ಗೆಲುವು ಸಾಧಿಸಲು ಮುಂದಾಗಿರುವ ಬಿಜೆಪಿಯು ಇನ್ನಿಲ್ಲದ ರಣತಂತ್ರ ರೂಪಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಹಿಡಿದು ಪ್ರಮುಖ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ, ಪ್ರಣಾಳಿಕೆ ರಚಿಸುವ ದೃಷ್ಟಿಯಿಂದ ಬಿಜೆಪಿಯು ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ನೇತೃತ್ವದಲ್ಲಿ ಬಿಜೆಪಿಯು ಚುನಾವಣಾ ಪ್ರಣಾಳಿಕೆ ಸಮಿತಿಯನ್ನು (BJP Election Manifesto Committee) ರಚಿಸಿದೆ. ಸಮಿತಿಯಲ್ಲಿ ಬಿಜೆಪಿಯ 27 ನಾಯಕರಿದ್ದಾರೆ.

ಸಮಿತಿಯಲ್ಲಿ ಯಾರಿದ್ದಾರೆ?

ಬಿಜೆಪಿಯ ಪ್ರಣಾಳಿಕೆ ಸಮಿತಿಗೆ ರಾಜನಾಥ್‌ ಸಿಂಗ್‌ ಅವರು ಅಧ್ಯಕ್ಷರಾಗಿದ್ದಾರೆ. ಇನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಮಿತಿಯ ಸಂಚಾಲಕಿಯಾಗಿದ್ದಾರೆ. ಪಿಯೂಷ್‌ ಗೋಯಲ್‌ ಅವರು ಸಹ ಸಂಚಾಲಕರಾಗಿದ್ದಾರೆ. ಇನ್ನುಳಿದಂತೆ ಅರ್ಜುನ್‌ ಮುಂಡಾ, ಭೂಪೇಂದರ್‌ ಯಾದವ್‌, ಕಿರಣ್‌ ರಿಜಿಜು, ಅಶ್ವಿನಿ ವೈಷ್ಣವ್‌, ಕಿರಣ್‌ ರಿಜಿಜು, ಹಿಮಂತ ಬಿಸ್ವಾ ಶರ್ಮಾ, ಸ್ಮೃತಿ ಇರಾನಿ, ವಸುಂಧರಾ ರಾಜೆ, ರವಿಶಂಕರ್‌ ಪ್ರಸಾದ್‌, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ರಾಜೀವ್‌ ಚಂದ್ರಶೇಖರ್‌ ಸೇರಿ ಹಲವರು ಸಮಿತಿಯ ಸದಸ್ಯರಾಗಿದ್ದಾರೆ.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!