CM Siddaramaiah: ಗ್ಯಾರಂಟಿ ಯೋಜನೆ ಬಗ್ಗೆ ಜನರಿಗೆ ಸತ್ಯ ತಿಳಿಸಿ; ಸಿಎಂ ಸಿದ್ದರಾಮಯ್ಯ ಕರೆ
PM Narendra Modi: ನಮ್ಮ ನಾಡಿನ ಜನತೆಗೆ, ಮಹಿಳೆಯರಿಗೆ, ಯುವ ಸಮೂಹಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುತ್ತಿರುವುದು ನಮ್ಮ ಕಾಂಗ್ರೆಸ್ ಸರ್ಕಾರ. ಆದರೆ ಬಿಜೆಪಿಯವರು ಮಾಮೂಲಿಯಂತೆ ಸುಳ್ಳು ಹೇಳುತ್ತಾ ನಮ್ಮ ಕಾರ್ಯಕ್ರಮಗಳನ್ನು ಅವರ ಕಾರ್ಯಕ್ರಮ ಎಂದು ಹೇಳಿಕೊಳ್ಳುವ ಅಪಾಯ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡುವುದಿಲ್ಲ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರಶ್ನೆ ಮಾಡಿದರು.
ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ (Guarantee Scheme) ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ, ತಾಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲ ಧರ್ಮ, ಎಲ್ಲ ಜಾತಿ, ಎಲ್ಲ ವರ್ಗದವರಿಗೆ ಸೇರಿವೆ. ಸರ್ವರನ್ನೂ ಸಮಾನವಾಗಿ ಕಾಣುವ ಕಾರ್ಯಕ್ರಮಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ರೂಪಿಸುತ್ತಿದೆ. ಜಾರಿ ಮಾಡುತ್ತಿದೆ. ಇವೆಲ್ಲವನ್ನೂ ನೀವುಗಳು ನಾಡಿನ ಜನರಿಗೆ ಸರಿಯಾಗಿ ಅರ್ಥ ಮಾಡಿಸಿ ಬಿಜೆಪಿಯ ಸುಳ್ಳುಗಳಿಗೆ ತಕ್ಕ ಸತ್ಯದ ದಾಖಲೆಗಳನ್ನು ಮಂಡಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
First Published on Vistara News.

Comments
Post a Comment