CT Ravi: FSL ವರದಿ ವಿಳಂಬಕ್ಕೆ ದೇಶದ್ರೋಹಿಗಳು, ಕಾಂಗ್ರೆಸ್ ನಂಟೇ ಕಾರಣ ಎಂದ ಸಿ.ಟಿ ರವಿ
CT Ravi : ಪಾಕಿಸ್ತಾನ್ ಜಿಂದಾಬಾದ್ ಘೋಷಣೆಯ ಎಫ್‌ಎಸ್‌ಎಲ್ ವರದಿ ಬಿಡುಗಡೆ ಮಾಡದಿರಲು ಮುಖ್ಯ ಕಾರಣ ದೇಶದ್ರೋಹಿಗಳಿಗೂ ಕಾಂಗ್ರೆಸ್‌ಗೂ ಇರುವ ನಂಟು ಎಂದು ಸಿ.ಟಿ ರವಿ ಆರೋಪಿಸಿದ್ದಾರೆ.
ಬೆಂಗಳೂರು: ಪಾಕಿಸ್ತಾನ್ ಜಿಂದಾಬಾದ್ (Pakistan Zindabad) ಎಂದು ಕೂಗಿದ ಮೂವರನ್ನು ಬಂಧಿಸಿರುವುದು ಸರಿ. ಆದರೆ, ಎಫ್‍ಎಸ್‍ಎಲ್ ವರದಿಯನ್ನು (FSL Report) ಯಾಕಿನ್ನೂ ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ (CT Ravi) ಅವರು ಪ್ರಶ್ನಿಸಿದ್ದಾರೆ.
ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಂಧಿತರು ಯಾರೋ ಚೇಲಾಗಳಿರಬೇಕು ಅಂದುಕೊಂಡಿದ್ದೆವು. ಅವರಿಗೆ ರಾಹುಲ್ ಗಾಂಧಿಯವರ (Rahul Gandhi) ಸಂಪರ್ಕ ಇರುವುದು ನಮಗೆ ಗೊತ್ತಿರಲಿಲ್ಲ ಎಂದು ತಿಳಿಸಿದರು. ಈಗ ರಾಹುಲ್ ಗಾಂಧಿಯವರ ಜೊತೆಗಿರುವ, ತಬ್ಬಿಕೊಂಡಿರುವ ಫೋಟೊ ಮಾಧ್ಯಮ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಾಕಿಸ್ತಾನ ಜಿಂದಾಬಾದ್ ನಂಟು ನಾವು ಅಂದುಕೊಂಡಿದ್ದ ರೀತಿಯನ್ನೂ ಮೀರಿದೆ. ಪಾಕಿಸ್ತಾನದ ಅಪ್ಪ, ಅಮ್ಮನಿಗೆ ಹುಟ್ಟಿದ ದೇಶದ್ರೋಹಿಗಳು ಕೂಗಿದ್ದಾರೆ ಎಂದುಕೊಂಡಿದ್ದೆವು. ದೇಶದ್ರೋಹಿಗಳಿಗೂ ಕಾಂಗ್ರೆಸ್ ನಾಯಕರಿಗೂ ಅಪ್ಪುಗೆಯ ನಂಟಿದೆ ಎಂದು ನಮಗೆ ತಿಳಿದಿರಲಿಲ್ಲ ಎಂದು ವಿಶ್ಲೇಷಿಸಿದರು.

Comments
Post a Comment