Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

 Gift Politics: ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಉಜ್ಜನಿ ಗ್ರಾಮದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ವಿರುದ್ಧ ವೃದ್ಧೆ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.


ತುಮಕೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರ ಆರಂಭಿಸಿವೆ. ಮತದಾರರನ್ನು ಸೆಳೆಯಲು ವಿವಿಧ ರೀತಿಯ ಉಡುಗೊರೆಗಳನ್ನು ನೀಡುತ್ತಿರುವುದೂ ಕಂಡುಬರುತ್ತಿದೆ. ಈ ನಡುವೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಉಜ್ಜನಿ ಗ್ರಾಮದಲ್ಲಿ ಮತದಾರರಿಗೆ ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಹಂಚಿಕೆ ಆರೋಪ ಕೇಳಿಬಂದಿದೆ. ಗ್ರಾಮದಲ್ಲಿ ಕುಕ್ಕರ್ ವಿತರಣೆಯಲ್ಲಿ ತಾರತಮ್ಯ ಮಾಡಿದ್ದಾರೆ, ನನಗ್ಯಾಕೆ ಕುಕ್ಕರ್‌ ನೀಡಿಲ್ಲ ಎಂದು ಕೇಳಿದ ವೃದ್ಧೆ ಮೇಲೆ ಹಲ್ಲೆ ಮಾಡಿರುವುದು ಕಂಡುಬಂದಿದೆ.

ಉಜ್ಜನಿ ಗ್ರಾಮದ ಗಂಗಮ್ಮ (75) ಹಲ್ಲೆಗೊಳಗಾದ ವೃದ್ಧೆ. ಕಾಂಗ್ರೆಸ್ ಕಾರ್ಯಕರ್ತ ನಾರಾಯಣ್ ಎಂಬಾತನ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ಗಾಯಗೊಂಡ ವೃದ್ಧೆಗೆ ಹುಲಿಯೂರುದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್‌ಗೆ ಮತ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತ ನಾರಾಯಣ್, ಕುಕ್ಕರ್‌ ಹಂಚಿ ಹಂಚಿ ಆಮಿಷ ಒಡ್ಡಿದ್ದಾರೆ ಎನ್ನಲಾಗಿದೆ. ಕುಕ್ಕರ್‌ ಹಂಚಿದಾಗ ಗ್ರಾಮದಲ್ಲಿ ಗಂಗಮ್ಮ ಇರಲಿಲ್ಲ. ಮನೆಗೆ ಬರುತ್ತಿದ್ದಂತೆ ಕುಕ್ಕರ್ ಹಂಚಿದ್ದ ವಿಚಾರ ಗೊತ್ತಾಗಿದ್ದರಿಂದ, ತನಗೂ ಕೊಡುವಂತೆ ನಾರಾಯಣ್ ಬಳಿ ಹೋಗಿ ಕೇಳಿದ್ದಾರೆ.

First Published on Vistara News.

Comments

Popular posts from this blog

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!