KS Eshwarappa : ಹಾವೇರಿ ಟಿಕೆಟ್‌ ಸಿಗದಿದ್ರೆ ಕೆ.ಎಸ್ ಈಶ್ವರಪ್ಪ ರೆಬೆಲ್‌ ಆಗೋದು ಗ್ಯಾರಂಟಿ?

 KS Eshwarappa : ಹಾವೇರಿ ಲೋಕಸಭಾ ಕ್ಷೇತ್ರದಿಂದ ಪುತ್ರ ಕಾಂತೇಶ್‌ಗೆ ಟಿಕೆಟ್‌ ಕೊಡಿಸಲೇಕು ಎಂದು ಹಠ ತೊಟ್ಟಿರುವ ಕೆ.ಎಸ್‌.ಈಶ್ವರಪ್ಪ ಅವರು ಟಿಕೆಟ್‌ ಸಿಗದಿದ್ದರೆ ಬಂಡೇಳುವ ಸೂಚನೆಯನ್ನು ನೀಡಿದ್ದಾರೆ.


ಶಿವಮೊಗ್ಗ: ರಾಜ್ಯದ ಹಿರಿಯ ಬಿಜೆಪಿ ನಾಯಕ ಕೆ.ಎಸ್‌. ಈಶ್ವರಪ್ಪ (KS Eshwarappa) ಅವರು ಹಾವೇರಿ ಲೋಕಸಭಾ ಕ್ಷೇತ್ರದ (Haveri Lokasabha Constituency) ಬಿಜೆಪಿ ಟಿಕೆಟ್‌ ಸಿಗದೆ ಇದ್ದರೆ ಬಂಡಾಯ ಅಭ್ಯರ್ಥಿಯಾಗಿ (Rebel Candidate) ಕಣಕ್ಕೆ ಇಳಿಯುವ ಸಾಧ್ಯತೆಗಳು ಕಾಣಿಸಿಕೊಂಡಿವೆ. ಈ ಬಗ್ಗೆ ಅಭಿಮಾನಿಗಳ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ ಎಂದು ಸ್ವತಃ ಕೆ.ಎಸ್‌. ಈಶ್ವರಪ್ಪ ಅವರೇ ಹೇಳಿಕೊಂಡಿದ್ದಾರೆ.

ಕೆ.ಎಸ್‌. ಈಶ್ವರಪ್ಪ ಅವರು ಕಳೆದ ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿ ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಕಣದಿಂದ ಹಿಂದೆ ಸರಿದಿದ್ದರು. ಆಗ ಅವರು ತಮ್ಮ ಪುತ್ರ ಕೆಇ ಕಾಂತೇಶ್‌ (KE Kantesh) ಅವರಿಗೆ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್‌ ಕೇಳಿದ್ದರು. ಆದರೆ, ಬಿಜೆಪಿ ಕೊಟ್ಟಿರಲಿಲ್ಲ. ಇದಾದ ಬಳಿಕ ಅವರು ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟನ್ನು ಮಗನಿಗೆ ಕೊಡಬೇಕು ಎಂದು ಕೇಳಿದ್ದರು. ಆದರೆ, ಅದು ಕೂಡಾ ಈಡೇರುವ ಲಕ್ಷಣಗಳು ಕಾಣುತ್ತಿಲ್ಲ.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!