Lakshmi Hebbalkar : ಗ್ಯಾರಂಟಿ ಯಾರಿಗೆ ತಲುಪಿಲ್ಲ ಹೇಳಿ, ಖುದ್ದಾಗಿ ತಲುಪಿಸುತ್ತೇವೆ ಎಂದ ಹೆಬ್ಬಾಳ್ಕರ್
Lakshmi Hebbalkar : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಾರಿಗಾದರೂ ತಲುಪದೆ ಇದ್ದರೆ ಅದನ್ನೂ ತಲುಪಿಸಬೇಕು ಎನ್ನುವ ಉದ್ದೇಶದಿಂದ ಗ್ಯಾರಂಟಿ ಸಮಾವೇಶಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ ಲಕ್ಷ್ಮೀ ಹೆಬ್ಬಾಳ್ಕರ್.
ಕೆ.ಜಿ.ಹಳ್ಳಿ (ಮಾಲೂರು): ಗ್ಯಾರಂಟಿ ಸಮಾವೇಶಗಳನ್ನು (Guarantee Samavesha) ನಾವು ಕಾಟಾಚಾರಕ್ಕೆ, ಕೇವಲ ಹೆಸರಿಗಾಗಿ ಮಾಡುತ್ತಿಲ್ಲ. ಯೋಜನೆಗಳು ಯಾರಿಗೆ ತಲುಪಲಿಲ್ಲ ಎಂದು ತಿಳಿದುಕೊಂಡು ಅವುಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶಕ್ಕಾಗಿ ಸಮಾವೇಶ ಮಾಡಲಾಗುತ್ತಿದೆ. ಯಾರಿಗೆ ತಲುಪಿಲ್ಲ ಎಂದು ತಿಳಿಸಿದರೆ ಅವರಿಗೆ ಖುದ್ದಾಗಿ ತಲುಪಿಸುವ ಕೆಲಸವನ್ನು ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.
ಮಾಲೂರು ತಾಲೂಕಿನ ಕೆ.ಜಿ.ಹಳ್ಳಿಯಲ್ಲಿ ಸೋಮವಾರ ನಡೆದ ಟೆಕಲ್ ಹೋಬಳಿ ಮಟ್ಟದ ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಅಂಗನವಾಡಿ, ಆಶಾ ಕಾರ್ಯಕರ್ತೆಯರ ಶ್ರಮದಿಂದ ಗ್ಯಾರಂಟಿ ಯೋಜನೆಗಳು (Guarantee Schemes) ಯಶಸ್ವಿಯಾಗಿವೆ ಎಂದರು.

Comments
Post a Comment