Lok Sabha Election 2024: ಮಂಡ್ಯ ಕ್ಷೇತ್ರದ ಮೈತ್ರಿ ಟಿಕೆಟ್ 100% ನನಗೇ ಸಿಗ್ತದೆ ಎಂದ ಸುಮಲತಾ

 Lok Sabha Election 2024: ಅಭ್ಯರ್ಥಿಗಳ ಘೋಷಣೆಗೂ ಮೊದಲು ದೆಹಲಿಗೆ ಹೋಗುವ ಅಗತ್ಯವಿಲ್ಲ. ಒಂದು ವೇಳೆ ಬರಲು ಹೇಳಿದರೆ ಹೋಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್‌ ತಿಳಿಸಿದ್ದಾರೆ.


ಮಂಡ್ಯ: ಯಾವುದೇ ಅನುಭವ ಇಲ್ಲದೇ ಕಳೆದ ಬಾರಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ನಿಂತಿದ್ದೆ. ನನಗೆ ಬೇಕಾದವರು ನಿಮ್ಮ ಜೊತೆ ಇರುತ್ತೇವೆ ಎಂದು ಗಟ್ಟಿಯಾಗಿ ನಿಂತಿದ್ದರು. ಈಗಿನ ಸಂದರ್ಭ ಬೇರೆಯೇ ಇದೆ. ಈ ಬಾರಿ ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ 100% ನನಗೆ ಸಿಗಲಿದೆ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ನೆನ್ನೆಯ ಲಿಸ್ಟ್ ನೋಡಿದರೆ ರಾಜ್ಯವಾರು ಪಟ್ಟಿ ಬಿಡುಗಡೆ ಮಾಡಿದ್ದಾರೆ. ಹಾಗೆ ಕರ್ನಾಟಕದ್ದು ಬಂದಾಗ ನಮ್ಮ ಎಲ್ಲರ ಹೆಸರು ಬರಬಹುದು. ಅಭ್ಯರ್ಥಿಗಳ ಘೋಷಣೆಗೂ ಮೊದಲು ದೆಹಲಿಗೆ ಹೋಗುವ ಅಗತ್ಯವಿಲ್ಲ. ಒಂದು ವೇಳೆ ನನ್ನು ಬರಲು ಹೇಳಿದರೆ ಹೋಗುತ್ತೇನೆ ಎಂದು ಹೇಳಿದರು.

ಈ ಬಾರಿಯ ಚುನಾವಣೆಯ ಪ್ರಚಾರ, ಹೋರಾಟ ಡಿಫೆರೆಂಟ್ ಆಗಿ ಇರುತ್ತೆ. ಯಶ್, ದರ್ಶನ್ ಬಂದ್ರೆ ಬಲ ಇರುತ್ತೆ, ಎಲ್ಲರ ಸಪೋರ್ಟ್ ಇದೆ. ಅವರು ನನಗೋಸ್ಕರ ಬರಿ ಸಪೋರ್ಟ್ ಅಲ್ಲ. ತ್ಯಾಗ ಮಾಡಿದ್ದಾರೆ. ಇಬ್ಬರೂ 25 ದಿನ ಸ್ವಾರ್ಥವಿಲ್ಲದೆ ನನ್ನ ಪರ ನಿಂತಿದ್ದರು. ಪದೇ ಪದೇ ಎಲ್ಲಾ ಬಿಟ್ಟು ಬನ್ನಿ ಎಂದು ಕರೆಯಲು ನನ್ನ ಮನಸ್ಸು ಒಪ್ಪಲ್ಲ.
ಯಶ್, ದರ್ಶನ್ ಸಿನಿಮಾಗಳಲ್ಲಿ ಬ್ಯುಸಿ ಇರುತ್ತಾರೆ. ಅವರು ಬಂದರೆ ಖಂಡಿತವಾಗಿ ಸ್ವಾಗತಿಸುವೆ ಎಂದು ತಿಳಿಸಿದರು.

First Published on Vistara News.


Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!