LoK Sabha Election 2024: ಕರ್ನಾಟಕ ಬಿಜೆಪಿ ಟಿಕೆಟ್‌ ಇಂದೇ ಫೈನಲ್; ಈ 17 ಮಂದಿಗೆ ಪಕ್ಕಾ!

 LoK Sabha Election 2024: ನವದೆಹಲಿಯಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್‌ ಮಾಡಲಾಗುವುದು. ಜತೆಗೆ ಜೆಡಿಎಸ್‌ಗೆ ಯಾವೆಲ್ಲ ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂಬುದು ಸಹ ತೀರ್ಮಾನ ಆಗಲಿದೆ. ಇನ್ನು ಬಿಜೆಪಿಯ 17 ಅಭ್ಯರ್ಥಿಗಳ ಪಟ್ಟಿ ಫೈನಲ್‌ ಆಗಿದೆ ಎಂದು ತಿಳಿದುಬಂದಿದೆ.


ಬೆಂಗಳೂರು: ಲೋಕಸಭಾ ಚುನಾವಣೆಗೆ (LoK Sabha Election 2024) ಭರದ ಸಿದ್ಧತೆ ನಡೆಯುತ್ತಿದೆ. ಇನ್ನೇನು ಚುನಾವಣೆ ಸಮೀಪ ಬರುತ್ತಿದೆ. ದಿನಾಂಕ ಘೋಷಣೆ ಇನ್ನೇನು ಆಗಲಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿವೆ. ಈಗಾಗಲೇ ಬಿಜೆಪಿ ಎಲ್ಲ ಪಕ್ಷಗಳಿಗಿಂತ ಮೊದಲು ವಿವಿಧ ರಾಜ್ಯಗಳ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಮುಂಚೂಣಿಯಲ್ಲಿದ್ದು, ಈಗ 2ನೇ ಪಟ್ಟಿಯನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇದರಲ್ಲಿ ಕರ್ನಾಟಕದ (BJP Karnataka) ಅಭ್ಯರ್ಥಿಗಳ ಪಟ್ಟಿ ಸಹ ಇರಲಿದೆ ಎನ್ನಲಾಗಿದ್ದು, ಇಂದು (ಬುಧವಾರ – ಮಾ. 6) ನವದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್‌ ಮಾಡಲಾಗುವುದು. ಜತೆಗೆ ಜೆಡಿಎಸ್‌ಗೆ (JDS Karnataka) ಯಾವೆಲ್ಲ ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂಬುದು ಸಹ ತೀರ್ಮಾನ ಆಗಲಿದೆ. ಇನ್ನು ಬಿಜೆಪಿಯ 17 ಅಭ್ಯರ್ಥಿಗಳ ಪಟ್ಟಿ ಫೈನಲ್‌ ಆಗಿದೆ ಎಂದು ತಿಳಿದುಬಂದಿದೆ.

ನವದೆಹಲಿಯಲ್ಲಿ ಬೀಡು ಬಿಟ್ಟಿರುವ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ (BS Yediyurappa) ಅವರು ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಫೈನಲ್‌ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರದ ನಾಯಕರ ಜತೆಗೆ ಇಂದು ಸಭೆ ಇದೆ. ವರಿಷ್ಠರ ಜತೆ 28 ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಯಲಿದೆ. ಜೆಡಿಎಸ್‌ಗೆ ಎಷ್ಟು ಸ್ಥಾನ ಬಿಟ್ಟು ಕೊಡಬೇಕು ಎಂಬುದನ್ನು ಹೈಕಮಾಂಡ್ (BJP High Command) ನಿರ್ಧಾರ ಮಾಡಲಿದೆ. ಇನ್ನು ವಿಧಾನಸಭೆಯಲ್ಲಿ ಸೋತ ನಾಯಕರು ಸಹ ಈ ಬಾರಿ ಟಿಕೆಟ್‌ಗೆ ಲಾಬಿ ನಡೆಸುತ್ತಿದ್ದು, ಅವರಿಗೆ ಟಿಕೆಟ್ ಕೊಡುವ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ. ಶೀಘ್ರದಲ್ಲಿ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಆಗಲಿದೆ.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!