Lok Sabha Election 2024: ಏ.3ಕ್ಕೆ ಮಂಡ್ಯದಲ್ಲೇ ನಿರ್ಧಾರ ಪ್ರಕಟಿಸುವೆ ಎಂದ ಸುಮಲತಾ! ಸ್ವತಂತ್ರ ಸ್ಪರ್ಧೆ ಸುಳಿವು?

 Lok Sabha Election 2024: ಚುನಾವಣೆ ಸ್ಪರ್ಧೆ ಸಂಬಂಧ ಸುಮಲತಾ ಅಂಬರೀಶ್‌ ಅವರು ಬೆಂಗಳೂರಿನ ನಿವಾಸದಲ್ಲಿ ಕರೆದಿದ್ದ ಮಹತ್ವದ ಸಭೆಯಲ್ಲಿ ಸಾವಿರಾರು ಅಭಿಮಾನಿಗಳು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಸಂಸದೆ, ತಮ್ಮ ರಾಜಕೀಯ ಮುಂದಿನ ನಡೆ ಬಗ್ಗೆ ಏ.3ರಂದು ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.


ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅವರು ಈ ಬಾರಿ ಚುನಾವಣೆಗೆ ಸ್ಪರ್ಧಿಸಬೇಕೋ, ಬೇಡವೋ ಎಂಬ ತೀರ್ಮಾನವನ್ನು ಏ.3ರಂದು ಮಂಡ್ಯದಲ್ಲಿ ಅಭಿಮಾನಿಗಳು, ಕಾರ್ಯಕರ್ತರ ಸಭೆ ನಡೆಸಿ, ಘೋಷಣೆ ಮಾಡುವುದಾಗಿ ಸುಮಲತಾ ಅಂಬರೀಶ್‌ ಪ್ರಕಟಿಸಿದ್ದಾರೆ. ಹೀಗಾಗಿ ಅವರ ಸ್ಪರ್ಧೆ ಬಗ್ಗೆ ಮತ್ತಷ್ಟು ಕುತೂಹಲ ಹೆಚ್ಚಿದೆ. ಅಲ್ಲದೇ ಅವರು ಅಭಿಮಾನಿಗಳ ಮುಂದೆ ಇಂದು ಆಡಿದ ಮಾತುಗಳನ್ನು ಗಮನಿಸಿದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದಂತಿದೆ.

ಬೆಂಗಳೂರಿನ ಜೆ.ಪಿ.ನಗರದ ನಿವಾಸದಲ್ಲಿ ಸೇರಿದ್ದ ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಸುಮಲತಾ ಮಾತನಾಡಿದ್ದಾರೆ. ಮಂಡ್ಯದಿಂದಲೇ ನನ್ನ ರಾಜಕೀಯ ಜೀವನ ಆರಂಭವಾಗಿದೆ. ಅಂಬರೀಶ್‌ ಅಭಿಮಾನಿಗಳ ಆಶೀರ್ವಾದದಿಂದ ನಾನು ಸಂಸದೆಯಾಗಿದ್ದೇನೆ. ಐದು ವರ್ಷಗಳ ಹಿಂದೆ ಈ ಪರಿಸ್ಥಿತಿಯೇ ನಿರ್ಮಾಣವಾಗಿತ್ತು. ಆಗ ನನಗೆ ಬೆಂಬಲವಾಗಿ ನಿಂತದ್ದು ಇದೇ ಅಭಿಮಾನಿಗಳು. ಮಂಡ್ಯ ಬಿಟ್ಟು ನನಗೆ ರಾಜಕಾರಣವೇ ಬೇಡ ಎಂದು ಹೇಳಿದ್ದೆ. ಈಗಲೂ ಅದೇ ನನ್ನ ಮಾತಾಗಿದೆ. ನನ್ನ ಸ್ವಾರ್ಥ ನೋಡಿ ನಾನು ತೀರ್ಮಾನ ತೆಗೆದುಕೊಳ್ಳಬಹುದಿತ್ತು. ಆದರೆ ಆ ರೀತಿ ಮಾಡಿಲ್ಲ. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ, ಮಂಡ್ಯ ಜನರೇ ಜನ್ನ ಶಕ್ತಿ. ಶೀಘ್ರದಲ್ಲೇ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

First Published on Vistara News.


Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!