Lok Sabha Election 2024: ಲೋಕಸಭೆಗೆ ಕಾಂಗ್ರೆಸ್‌ನ 9 ಅಭ್ಯರ್ಥಿಗಳ ಫೈನಲ್; ಇವರೇ ನೋಡಿ ಕೈಕಲಿಗಳು!
Lok Sabha Election 2024: ಕಾಂಗ್ರೆಸ್ 10 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಕೆಲವು ಕ್ಷೇತ್ರಗಳಿಗೆ ಪ್ರಬಲ ಅಭ್ಯರ್ಥಿಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಕೆಲವು ಕಡೆ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಲಾಗಿದೆ. ಈ ನಡುವೆ ಬಿಜೆಪಿ 28 ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡುವವರೆಗೂ ಕೈಪಡೆ ಕಾಯಲಿದೆ. ಬಳಿಕ ಅಂತಿಮ ಪಟ್ಟಿಯನ್ನು ಹೊರಬಿಡಲಿದೆ.
ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಇನ್ನೇನು ಹತ್ತಿರ ಬಂದೇಬಿಟ್ಟಿದೆ. ಹೀಗಾಗಿ ರಾಜಕೀಯ ಪಕ್ಷಗಳಲ್ಲಿ ದಿನೇ ದಿನೆ ಆತಂಕಗಳು ಹೆಚ್ಚಾಗ ತೊಡಗಿವೆ. ಹೀಗಾಗಿ ಪ್ರತಿಯೊಂದು ಹೆಜ್ಜೆಯನ್ನೂ ಲೆಕ್ಕಾಚಾರ ಮಾಡಿ ಇಡುತ್ತಿದ್ದಾರೆ. ಬಿಜೆಪಿ ಈಗಾಗಲೇ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿ ಬಿಡುಗಡೆಗೆ ಸಜ್ಜಾಗಿದೆ. ಅದರಲ್ಲಿ ಕರ್ನಾಟಕದ (BJP Karnataka) ಅಭ್ಯರ್ಥಿಗಳ ಹೆಸರನ್ನೂ ಘೋಷಣೆ ಮಾಡಲಿದೆ. ಅದೇ ಕಾಂಗ್ರೆಸ್ ಸಹ ಭರ್ಜರಿ ಸಿದ್ಧತೆಯಲ್ಲಿ ತೊಡಗಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ಗುರುವಾರ ನವ ದೆಹಲಿಯಲ್ಲಿ ಸಭೆ ನಡೆಸಲಾಗಿದೆ. ಇಲ್ಲಿ ಕರ್ನಾಟಕದ (Congress Karnataka) 14 ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿ 9 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.
ಹೈಕಮಾಂಡ್ ಸಭೆಗೆ ಮುಂಚಿತವಾಗಿ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಚರ್ಚೆ ನಡೆಸಿ ಒಂದು ಹಂತದ ಪಟ್ಟಿಯನ್ನು ಸಿದ್ಧಪಡಿಸಿದ್ದರು. ಈ ಪಟ್ಟಿಯ ಬಗ್ಗೆ ಹೈಕಮಾಂಡ್‌ನಲ್ಲಿ ಚರ್ಚೆಯಾಗಿದ್ದು, 9 ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಲಾಗಿದೆ. ಈ ಪಟ್ಟಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.
First Published on Vistara News.

Comments
Post a Comment