Lok Sabha Election 2024: ಹಾಲಿ ಸಂಸದರಿಗೆ ಟಿಕೆಟ್; ಡಿಸೈಡ್ ಆಗಿದ್ದಾರಾ ಶಾ? ರಾಜ್ಯ ನಾಯಕರಿಗೆ ಹೇಳಿದ್ದೇನು?
Lok Sabha Election 2024: ಈಗ ಕೆಲ ಹಾಲಿ ಸಂಸದರ ಬದಲಾವಣೆ ಭವಿಷ್ಯ ಬಿಜೆಪಿ ಹೈ ಕಮಾಂಡ್ ಕೈಯಲ್ಲಿದೆ. ಬುಧವಾರ ನವ ದೆಹಲಿಯಲ್ಲಿ 5 ಗಂಟೆಗಳ ಕಾಲ ಸಭೆ ನಡೆಸಿದರೂ ಕೆಲವು ಹಾಲಿ ಸಂಸದರ ಬದಲಾವಣೆ ಬಗ್ಗೆ ಬಿಜೆಪಿ ಹೈಕಮಾಂಡ್ ನಾಯಕರು ತುಟಿ ಬಿಚ್ಚಲಿಲ್ಲ ಎಂದು ತಿಳಿದು ಬಂದಿದೆ.
ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದೆ. ಈ ನಡುವೆ ಈಗಾಗಲೇ ಮೊದಲ ಪಟ್ಟಿಯನ್ನು ಸಹ ಬಿಜೆಪಿ ಪ್ರಕಟ ಮಾಡಿದೆ. ಆ ಮೂಲಕ ಇತರ ಪಕ್ಷಗಳಿಗಿಂತ ಒಂದು ಹೆಜ್ಜೆ ಮುಂದಿದೆ. ಈಗ ಎರಡನೇ ಪಟ್ಟಿ ಬಿಡುಗಡೆಗೂ ಸಿದ್ಧತೆ ಮಾಡಿಕೊಂಡಿದ್ದು, ಕರ್ನಾಟಕದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಮುಂದಾಗಿದೆ. ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ರಾಜ್ಯ ಬಿಜೆಪಿ ನಾಯಕ ಸಭೆ ನಡೆದಿದ್ದು, ಈ ನಡುವೆ ಕೆಲವು ಹಾಲಿ ಸಂಸದರಿಗೆ ಟಿಕೆಟ್ ಕೊಡಬೇಕೋ? ಬೇಡವೋ ಎಂಬ ಬಗ್ಗೆ ಚರ್ಚೆಗಳು ನಡೆದಿವೆ.
ಈಗ ಕೆಲ ಹಾಲಿ ಸಂಸದರ ಬದಲಾವಣೆ ಭವಿಷ್ಯ ಬಿಜೆಪಿ ಹೈ ಕಮಾಂಡ್ ಕೈಯಲ್ಲಿದೆ. ಬುಧವಾರ ನವ ದೆಹಲಿಯಲ್ಲಿ 5 ಗಂಟೆಗಳ ಕಾಲ ಸಭೆ ನಡೆಸಿದರೂ ಕೆಲವು ಹಾಲಿ ಸಂಸದರ ಬದಲಾವಣೆ ಬಗ್ಗೆ ಬಿಜೆಪಿ ಹೈಕಮಾಂಡ್ ನಾಯಕರು ತುಟಿ ಬಿಚ್ಚಲಿಲ್ಲ ಎಂದು ತಿಳಿದು ಬಂದಿದೆ. ಹಾಲಿ ಸಂಸದರ ಬಗ್ಗೆ ಈಗಾಗಲೇ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ.
First Published on Vistara News.

Comments
Post a Comment