Lok Sabha Election 2024 : ಮೋದಿ ಜನಪ್ರಿಯತೆ ಉತ್ತುಂಗಕ್ಕೆ, ಮತ್ತೊಮ್ಮೆ ಸರ್ಕಾರ ಗ್ಯಾರಂಟಿ ಎಂದ ವಿಜಯೇಂದ್ರ

 Lok Sabha Election 2024 : ಪ್ರಧಾನಿ ನರೇಂದ್ರ ಮೊದಿ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಏರುತ್ತಿದೆ. ಹೀಗಾಗಿ ಈ ಬಾರಿ ಬಿಜೆಪಿ ಗೆದ್ದು ಅಧಿಕಾರಕ್ಕೇರುವುದು ಖಚಿತ ಎಂದು ಬಿ.ವೈ ವಿಜಯೇಂದ್ರ ಹೇಳಿದರು.


ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು 10 ವರ್ಷಗಳು ಕಳೆದರೂ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಜನಪ್ರಿಯತೆ ಇನ್ನೂ ಉತ್ತುಂಗಕ್ಕೇ ಏರುತ್ತಿದೆ. ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಮುಂದಿನ ಬಾರಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು ವಿಶ್ಲೇಷಿಸಿದ್ದಾರೆ.

ಹೋಟೆಲ್ ಜಿ.ಎಂ. ರಿಜಾಯ್ಸ್‌ ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ (BJP Media Centre) ಉದ್ಘಾಟನೆ ಸಂದರ್ಭದಲ್ಲಿ ಅವರು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ಮತ್ತೊಮ್ಮೆ ಮೋದಿ ಸರಕಾರ ಎಂಬುದು ಕೇವಲ ಬಿಜೆಪಿ ಕಾರ್ಯಕರ್ತರ ಆಶಯವಲ್ಲ; ಇದು ರಾಜ್ಯದ ಮತ್ತು ದೇಶದ ಜವಾಬ್ದಾರಿಯುತ ನಾಗರಿಕ ಮತದಾರರ ನಿರ್ಧಾರ. ನರೇಂದ್ರ ಮೋದಿಯವರ ಕಳೆದ 10 ವರ್ಷಗಳ ಕಾರ್ಯವೈಖರಿ, ಆಡಳಿತ ವೈಖರಿ, ಕೇಂದ್ರದ ಮೋದಿ ನೇತೃತ್ವದ ಜನಪರ ಯೋಜನೆಗಳ ಪರಿಣಾಮವಾಗಿ ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದು 10 ವರ್ಷಗಳು ಕಳೆದರೂ ನರೇಂದ್ರ ಮೋದಿ ಅವರ ಜನಪ್ರಿಯತೆ ಇನ್ನೂ ಉತ್ತುಂಗಕ್ಕೆ ಏರಿದೆ ಎಂದು ಹೇಳಿದರು.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!