Lok Sabha Election 2024: ಹೊಸ ಅಭ್ಯರ್ಥಿಗಳಿಗೆ ಬಿಜೆಪಿ ಟಾಸ್ಕ್; ಬಿ.ವೈ. ವಿಜಯೇಂದ್ರ ಹೇಳಿದ್ದೇನು?
Lok Sabha Election 2024: ಎಲ್ಲೆಲ್ಲಿ ಅಭ್ಯರ್ಥಿಗಳ ಬದಲಾವಣೆಯಾಗಿದೆಯೋ ಆ ಅಭ್ಯರ್ಥಿಗಳು ಮೊದಲು ಮಾಡಬೇಕಾದ ಕೆಲಸ ಎಂದರೆ, ಹಾಲಿ ಸಂಸದರನ್ನು ಭೇಟಿ ಮಾಡಿ ಅವರನ್ನು ವಿಶ್ವಾಸಕ್ಕೆ ಪಡೆದುಕೊಳ್ಳಬೇಕಿದೆ. ಈ ಮೂಲಕ ನೂತನ ಅಭ್ಯರ್ಥಿಗಳಿಗೆ ಇನ್ನಷ್ಟು ಟಾಸ್ಕ್‌ಗಳನ್ನು ಬಿಜೆಪಿ ಹೈಕಮಾಂಡ್ ನೀಡಿದೆ.
ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸುವಲ್ಲಿ ನಿರತವಾಗಿವೆ. ಹಲವು ಲೆಕ್ಕಾಚಾರಗಳೊಂದಿಗೆ, ಅಳೆದೂ ತೂಗಿ ಟಿಕೆಟ್ ಕೊಡಲಾಗುತ್ತಿದೆ. ಎಲ್ಲ ಪಕ್ಷಗಳಿಗೂ ಗೆಲ್ಲುವ ಅಭ್ಯರ್ಥಿಯೇ ಬೇಕಿದೆ. ಹೀಗಾಗಿ ಈ ನಿಟ್ಟಿನಲ್ಲಿ ಕಾರ್ಯತಂತ್ರಗಳನ್ನು ಹೆಣೆಯುತ್ತಿವೆ. ಇದೇ ವೇಳೆ ಬಿಜೆಪಿ ಹಲವು ಪ್ರಯೋಗಗಳನ್ನು ಮಾಡಿದೆ. ಈ ಬಾರಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ 20 ಕ್ಷೇತ್ರಗಳ ಟಿಕೆಟ್ ಅನ್ನು ಘೋಷಣೆ ಮಾಡಿದೆ. ಅದರಲ್ಲಿ ಹಾಲಿ 8 ಸಂಸದರಿಗೆ ಟಿಕೆಟ್ ಮಿಸ್ ಆಗಿದೆ. ಇದೇ ವೇಳೆ ಬಿಜೆಪಿ ನೂತನ ಅಭ್ಯರ್ಥಿಗಳಿಗೆ ಬಿಜೆಪಿ ಹೈಕಮಾಂಡ್ (BJP high command) ಕೆಲವೊಂದು ಸ್ಪಷ್ಟ ಸಂದೇಶವನ್ನು ರವಾನೆ ಮಾಡಿದೆ. ಎಲ್ಲರನ್ನೂ ಒಳಗೊಂಡು ಪ್ರಚಾರ ಮಾಡಲು ಸೂಚನೆ ಕೊಟ್ಟಿದೆ. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಸಹ ಮಾತನಾಡಿದ್ದು, ಕೆಲವರ ಗೊಂದಲಕ್ಕೆ ಮೂರ್ನಾಲ್ಕು ದಿನದಲ್ಲಿ ಉತ್ತರ ಸಿಗುತ್ತದೆ ಎಂದು ಹೇಳಿದ್ದಾರೆ.
ಈ ಬಾರಿ ಬಿಜೆಪಿಯಿಂದ ಹಾಲಿ ಸಂಸದರನ್ನು ಬದಲಿಸಿ ನಾಲ್ಕು ಹೊಸ ಮುಖಗಳನ್ನು ಪರಿಚಯಿಸಲಾಗಿದೆ. ದಕ್ಷಿಣ ಕನ್ನಡದಿಂದ ಬ್ರಿಜೇಶ್ ಚೌಟ, ದಾವಣಗೆರೆಯಿಂದ ಗಾಯತ್ರಿ, ಮೈಸೂರಿನಿಂದ ಯದುವೀರ್ ಒಡೆಯರ್, ಕೊಪ್ಪಳದಿಂದ ಕೆ. ಬಸವರಾಜ್ ಅವರು ಹೊಸ ಮುಖಗಳಾಗಿದ್ದಾರೆ. ಇವರಿಗೆ ಚುನಾವಣೆ ಇದೇ ಮೊದಲಾಗಿದೆ. ಇವರೂ ಸೇರಿದಂತೆ ಎಲ್ಲೆಲ್ಲಿ ಅಭ್ಯರ್ಥಿಗಳ ಬದಲಾವಣೆಯಾಗಿದೆಯೋ ಆ ಅಭ್ಯರ್ಥಿಗಳು ಮೊದಲು ಮಾಡಬೇಕಾದ ಕೆಲಸ ಎಂದರೆ, ಹಾಲಿ ಸಂಸದರನ್ನು ಭೇಟಿ ಮಾಡಿ ಅವರನ್ನು ವಿಶ್ವಾಸಕ್ಕೆ ಪಡೆದುಕೊಳ್ಳಬೇಕಿದೆ. ಈ ಕೂಡಲೇ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಲು ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ.
First Published on Vistara News.

Comments
Post a Comment