Lok Sabha Election: ಲೋಕಸಭೆ ಚುನಾವಣೆ ಘೋಷಣೆ; 97 ಕೋಟಿ ಜನ ಮತದಾನಕ್ಕೆ ಸಜ್ಜು
Lok Sabha Election: ಲೋಕಸಭೆ ಚುನಾವಣೆ ದಿನಾಂಕವನ್ನು ಚುನಾವಣೆ ಆಯೋಗವು ಘೋಷಣೆ ಮಾಡಿದೆ. ಈ ಬಾರಿ 97 ಕೋಟಿ ಮತದಾರರು ಹಕ್ಕು ಚಲಾಯಿಸಲು ಸಜ್ಜಾಗಿದ್ದಾರೆ ಎಂದು ಆಯೋಗ ತಿಳಿಸಿದೆ.
ನವದೆಹಲಿ: ಕೇಂದ್ರ ಚುನಾವಣಾ ಆಯೋಗವು (Election Commission Of India) ಲೋಕಸಭೆ ಚುನಾವಣೆ ದಿನಾಂಕ (Lok Sabha Election) ಘೋಷಿಸಿದೆ. ಅದರಲ್ಲೂ. ಈ ಬಾರಿ 97 ಕೋಟಿ ಮತದಾರರು ಹಕ್ಕು ಚಲಾವಣೆ ಮಾಡಲು ಸಜ್ಜಾಗಿದ್ದಾರೆ ಎಂದು ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದರು. ಸಮರ್ಪಕ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗಾಗಿ ಆಯೋಗವು ಸಜ್ಜಾಗಿದೆ ಎಂದು ತಿಳಿಸಿದರು.
ಈಗಿನಿಂದಲೇ ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಯಾರು ಕೂಡ ನಿಯಮಗಳನ್ನು ಮೀರಬಾರದು. ಮಾದರಿ ನೀತಿ ಸಂಹಿತೆ ಜಾರಿ ವೇಳೆ ಹಿಂಸಾಚಾರ ಎಸಗಿದವರ ವಿರುದ್ಧ ಜಾಮೀನು ರಹಿತ ಕೇಸ್ ದಾಖಲಿಸಲಾಗುತ್ತದೆ. ಹಣ, ತೋಳ್ಬಲ, ತಪ್ಪು ಮಾಹಿತಿ ರವಾನೆಯನ್ನು ತಡೆಯಲು ಆಯೋಗವು ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. ಇನ್ನು, ರಾಜಕೀಯ ವ್ಯಕ್ತಿಗಳು ಕೂಡ ವಿಷಯಗಳ ಆಧಾರಿತವಾಗಿ ಪ್ರಚಾರ ಮಾಡಬೇಕೇ ಹೊರತು, ಗೊಂದಲ, ಗಲಾಟೆಗೆ ಅವಕಾಶ ಮಾಡಿಕೊಡಬಾರದು ಎಂದು ಸೂಚಿಸಿದರು.

Comments
Post a Comment